ಕರ್ನಾಟಕಕ್ಕೆ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ’

Date:

  • ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ
  • ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ ಸಚಿವಾಲಯದ ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023’ಕ್ಕೆ ಪಾತ್ರವಾಗಿದೆ.

- Advertisement -

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ ಪ್ರಶಸ್ತಿ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿಯ ಪ್ರಶಸ್ತಿ ದೊರೆತಿದೆ.

ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ ಜೆ ಜಾರ್ಜ್‌

ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಈ ಪ್ರಶಸ್ತಿಯ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

“ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

“ಇಂಧನ ದಕ್ಷತೆಯ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಮುಂದಿದೆ. ಇಂಧನ ಸಂರಕ್ಷಣಾ ಕಾಯ್ದೆ- 2001ರ ಅನ್ವಯ ಇಂಧನ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿಯ ಗುರಿ ಸಾಧನೆಗೆ ಶ್ರಮಿಸಲಾಗುವುದು,” ಎಂದು ಇಂಧನ ಮತ್ತು ಮೂಲಸೌಕರ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದ್ದಾರೆ.

ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಧನ ಸಂರಕ್ಷಣೆ ಮತ್ತು ದಕ್ಷತೆಯಲ್ಲಿ (ಇಸಿ ಮತ್ತು ಇಇ) ರಾಜ್ಯ ಮುಂಚೂಣಿಯಲ್ಲಿದೆ. 5 ವರ್ಷಗಳ ಅವಧಿಯಲ್ಲಿ 5 ಪ್ರಮುಖ ವಲಯಗಳಲ್ಲಿ ಸುಮಾರು 744 ಮಿಲಿಯನ್ ಯೂನಿಟ್ ಇಂಧನ ಉಳಿತಾಯ ಗುರಿ ಸಾಧಿಸಲು ಸರ್ಕಾರ ಮತ್ತು ಖಾಸಗಿಯವರೊಂದಿಗೆ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಕರ್ನಾಟಕವು ಸತತ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿದೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರ ಪ್ರಶಸ್ತಿಯನ್ನು ಘೋಷಿಸಿದ್ದು, ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...