ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

Date:

ಬೆಂಗಳೂರಿನಲ್ಲಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಸಂಘಟನೆಯು ಆಯೋಜಿಸಿದ್ದ ‘ಜನತಾ ನ್ಯಾಯಾಲಯ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್, ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾದ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದ್ದು, ಇದು ಪ್ರತಿಯೊಬ್ಬ ಪ್ರಜೆಯ ಗೌರವಕ್ಕೆ ಎಸಗಿದ ಘೋರ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರಜಾಪ್ರಭುತ್ವದಲ್ಲಿ ಐದು ವರ್ಷಕ್ಕೊಮ್ಮೆ ಬರುವ ರಾಜಕಾರಣಿಗಳು ಮತದಾರರ ಕಾಲಿಗೆ ಬಿದ್ದು ಓಟು ಕೇಳುತ್ತಿದ್ದರು. ಆದರೆ ಇಂದಿನ ಪರಿಸ್ಥಿತಿ ಬದಲಾಗಿದ್ದು, ಪ್ರಜೆಗಳು ತಮ್ಮ ಮತವನ್ನು ವಾಪಸ್ ಪಡೆಯಲು ಅಧಿಕಾರಿಗಳ ಕಚೇರಿ ಮುಂದೆ ಸಾಲಿನಲ್ಲಿ ನಿಲ್ಲುವಂತಾಗಿದೆ. ದೇಶದಲ್ಲಿ ಯಾರಿಗೆ ಮತದಾನದ ಹಕ್ಕಿರಬೇಕು ಎಂಬುದನ್ನು ಜನ ನಿರ್ಧರಿಸಬೇಕೇ ವಿನಃ, ಅಧಿಕಾರದಲ್ಲಿರುವವರಲ್ಲ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನೂ ಓದಿ: ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಈ ಸಂದರ್ಭದಲ್ಲೇ ‘ವೋಟ್ ಚೋರ್, ಗದ್ದಿ ಚೋರ್’ (ಮತ ಕದಿಯುವವರು, ಗದ್ದುಗೆ ಕದಿಯುವವರು) ಎಂದು ಘೋಷಣೆ ಕೂಗಿದ ಅವರು, ಮತ ಕಳೆದುಕೊಂಡಿರುವುದು ಬರಿ 13 ಕೋಟಿ ಸಂಖ್ಯೆಯಲ್ಲ; ಬದಲಿಗೆ ಪ್ರತಿಯೊಬ್ಬ ಸಂತ್ರಸ್ತ ಪ್ರಜೆಯ ಬದುಕಿನ ಕಣ್ಣೀರಿನ ಕಥೆಯಾಗಿದೆ ಎಂದರು.

ಈ ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದ್ದು, ದೇಶದ ಪ್ರಜೆಗಳನ್ನು ನೇರವಾಗಿ ಕೊಲ್ಲಲು ಸಾಧ್ಯವಾಗದ ಕಾರಣ ಮತಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ವಿಶೇ‍ಷವಾಗಿ ಪಟ್ಟಣಿಗರಷ್ಟೇ ಅಲ್ಲದೆ ಆದಿವಾಸಿಗಳು, ಬಡವರು, ಮುಸ್ಲಿಮರು ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಗುರಿಯಾಗಿಸಿ ತೆಗೆದುಹಾಕಲಾಗುತ್ತಿದೆ. ಜನಸಾಮಾನ್ಯರು ಮತ ಚಲಾಯಿಸಿ ತಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಬಾರದು ಎಂಬ ದುರುದ್ದೇಶದಿಂದ ಈ ಹುನ್ನಾರ ನಡೆದಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ನೆಪದಲ್ಲಿ ಪ್ರಜೆಗಳನ್ನೇ ಪ್ರಜಾಪ್ರಭುತ್ವದಿಂದ ಹೊರಹಾಕಲು ಹೊರಟಿದೆ ಎಂದು ಅವರು ಕಿಡಿಕಾರಿದರು.

prakash1
ಮತದಾನದ ಹಕ್ಕು ಕಳೆದುಕೊಂಡವರೊಂದಿಗೆ ಸಾಹಿತಿ ದೇವನೂರ ಮಹದೇವಪ್ಪ, ನಟ ಪ್ರಕಾಶ್ ರಾಜ್ ಮೊದಲಾದವರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ಒಂದೇ ಈ ಸಮಸ್ಯೆಗೆ ಪರಿಹಾರವಲ್ಲ. ಒಬ್ಬರು ಹೋದರೆ ಮತ್ತೊಬ್ಬರು ಬರುತ್ತಾರೆ. ಆದ್ದರಿಂದ ಸಂಪೂರ್ಣ ‘ಎಸ್‌ಐಆರ್’ (SIR) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ತದನಂತರ ಈ ಅಕ್ರಮದ ಹಿಂದಿರುವ ಗ್ಯಾನೇಶ್ ಕುಮಾರ್ ಅವರನ್ನು ತನಿಖೆಗೆ ಒಳಪಡಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇವರ ಹಿಂದೆ ಆಡಳಿತ ನಡೆಸುತ್ತಿರುವ ನಾಯಕರ ಆಟ ಇನ್ಮುಂದೆ ನಡೆಯುವುದಿಲ್ಲ; ಯುವಜನತೆ ಮತ್ತು ಪ್ರಜೆಗಳು ಈಗ ಜಾಗೃತರಾಗಿದ್ದಾರೆ ಎಂದು ಎಚ್ಚರಿಸಿದರು.

ಈ ಹೋರಾಟವು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ್ದಲ್ಲ, ಬದಲಿಗೆ ದೇಶದ ಜವಾಬ್ದಾರಿಯುತ ಪ್ರಜೆಗಳು ತಮ್ಮ ಹಕ್ಕಿಗೋಸ್ಕರ ಮಾಡುತ್ತಿರುವ ಹೋರಾಟವಾಗಿದೆ. ಈ ಹೋರಾಟದಲ್ಲಿ ನಾವೆಲ್ಲರೂ ಗೆಲ್ಲಬೇಕಾದರೆ ಶಾಂತಿಯುತವಾಗಿ ರಸ್ತೆಗಿಳಿದು ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.

ಸಂಘಟಕರು ಮನೆ ಮನೆಗೆ, ಬೂತ್‌ಗಳಿಗೆ ಹಾಗೂ ಹಳ್ಳಿಗಳಿಗೆ ತೆರಳಿ ಹಗಲು-ರಾತ್ರಿ ಶ್ರಮಿಸಿ ಅಕ್ರಮದ ವಿರುದ್ಧ ಸಾಕ್ಷ್ಯಾಧಾರಗಳನ್ನು (ಡಾಟಾ) ಕಲೆಹಾಕಿದ್ದಾರೆ. ಈ ಹೋರಾಟಕ್ಕೆ ದೃಢ ಬುನಾದಿ ಹಾಕಿಕೊಟ್ಟ ಯುವಜನತೆ ಮತ್ತು ಕರ್ನಾಟಕದ ವಿವಿಧ ಸಂಘ-ಸಂಸ್ಥೆಗಳ ಶ್ರಮ ಶ್ಲಾಘನೀಯ. ರಾಜ್ಯ ಅಥವಾ ದೇಶಕ್ಕೆ ತೊಂದರೆ ಬಂದಾಗ ಕನ್ನಡಿಗರು ಒಗ್ಗಟ್ಟಾಗಿ ನಿಲ್ಲುತ್ತಾರೆ ಎಂಬುದಕ್ಕೆ ಈ ಸಮಾವೇಶವೇ ಸಾಕ್ಷಿ. ಸರ್ಕಾರ ಎಸ್‌ಐಆರ್ ರದ್ದುಗೊಳಿಸಿ, ನಾಗರಿಕರ ಘನತೆಯನ್ನು ಮರುಸ್ಥಾಪಿಸುವವರೆಗೂ ಈ ರಸ್ತೆ ಹೋರಾಟ ಮುಂದುವರಿಯಲಿದೆ ಎಂದು ಪ್ರಕಾಶ್ ರಾಜ್ ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...