ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಆಸ್ಪತ್ರೆಗೆ ದಾಖಲು

Date:

ಕಾಂಗ್ರೆಸ್ ನಾಯಕ ಹಾಗೂ ರಾಜ್ಯದ ಮಾಜಿ ಅರಣ್ಯ ಸಚಿವ ಬಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಸಮೀಪ ನಡೆದಿದೆ.

- Advertisement -

ರಮಾನಾಥ ರೈ ಅವರು ತಮ್ಮ ಬೆಂಬಲಿಗರೊಂದಿಗೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದ ರಮಾನಾಥ ರೈ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಮಂಗಳೂರು | ಬ್ಯಾರಿ ಭಾಷೆಯನ್ನು ಸಮುದಾಯಕ್ಕೆ ಸೀಮಿತಗೊಳಿಸಬಾರದು: ರಮಾನಾಥ ರೈ

ಘಟನೆ ನಡೆದ ಕೂಡಲೇ ಸ್ಥಳೀಯರು ಹಾಗೂ ಕಾರ್ಯಕರ್ತರು ತಕ್ಷಣವೇ ಸ್ಪಂದಿಸಿ, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಹಾಗೂ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿದ್ದಾರೆ. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...