ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯಕ್ಕೆ ತಡೆ: ಮೇಲ್ಮನವಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Date:

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಇತ್ತೀಚೆಗೆ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿದೆ.

- Advertisement -

ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವಾಗ ಹತ್ತು ಜನಕ್ಕಿಂತ ಹೆಚ್ಚು ಮಂದಿ ಇದ್ದರೆ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಧಾರವಾಡ ಪೀಠದ ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತು ಕೆ ಬಿ ಗೀತಾ ಅವರ ವಿಭಾಗೀಯ ಪೀಠವು ವಾದ ವಿವಾದವನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ಆದೇಶಕ್ಕೆ ಹೈಕೋರ್ಟ್‌ ತಡೆ

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, “ಸರ್ಕಾರವು ತನ್ನ ಆಸ್ತಿ ಮತ್ತು ಸಾರ್ವಜನಿಕರ ಹಕ್ಕು ರಕ್ಷಣೆಗಾಗಿ ಸಾರ್ವಜನಿಕ ಸ್ಥಳದಲ್ಲಿ ಅನುಮತಿಯಿಲ್ಲದೆ ಸಮಾವೇಶ, ಮೆರವಣಿಗೆ ನಡೆಸುದಕ್ಕೆ ತಡೆ ನೀಡಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಇದು ಅಪರಾಧ ಕೃತ್ಯವಾಗಿರುವುದನ್ನು ಪರಿಗಣಿಸಿ ಸರ್ಕಾರ ಆದೇಶಿಸಿದೆ. ಆದರೆ ಏಕಸದಸ್ಯ ಪೀಠದ ಆದೇಶವು ಸರ್ಕಾರದ ಹಕ್ಕನ್ನು ಕಸಿದಿದೆ. ಅನುಮತಿ ಪಡೆಯದೆ ಖಾಸಗಿ ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಏನು ಬೇಕಾದರೂ ಮಾಡಲು ಬಿಡುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.

“ರಸ್ತೆಯಲ್ಲಿ ಮೆರವಣಿಗೆ ಮಾಡಲು ಅನುಮತಿ ಪಡೆಯವುದು ಕಡ್ಡಾಯ. ಉದ್ಯಾನ, ಆಟದ ಮೈದಾನ ಬಗ್ಗೆ ಬೇರೆಯೇ ವ್ಯಾಖ್ಯಾನವಿದೆ. ಇಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡದು. ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಜನರಿಗೆ ಓಡಾಡಲು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ಅನುಮತಿ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಇದರಲ್ಲಿ ತಪ್ಪೇನಿದೆ” ಎಂದು ಸರ್ಕಾರದ ಪರ ವಕೀಲರು ಪ್ರಶ್ನಿಸಿದ್ದಾರೆ.

ಈ ವೇಳೆ “ಮಧ್ಯಂತರ ಆದೇಶ ತೆರವು ಮಾಡುವಂತೆ ಕೋರಿ ಏಕಸದಸ್ಯ ಪೀಠದ ಮುಂದೆ ಮೆಮೊ ಸಲ್ಲಿಸಬಹುದಲ್ಲವೇ” ಎಂದು ಪೀಠ ಪ್ರಶ್ನಿಸಿದ್ದು, “ಏಕಸದಸ್ಯ ಪೀಠ ಮಧ್ಯಂತರ ಆದೇಶದ ಬದಲಾಗಿ ತಡೆಯಾಜ್ಞೆಯನ್ನು ನೀಡಿದೆ. ಹೀಗಾಗಿ ನಾವು ಮುಂದಿನ ನ್ಯಾಯಾಲಯಕ್ಕೆ ಹೋಗಬೇಕಾಯಿತು” ಎಂದು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ತಿಳಿಸಿದ್ದಾರೆ.

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರುಗಳು ನಡುವೆ ತೀವ್ರ ವಾಗ್ವಾದವೂ ನಡೆದಿತ್ತು. ಈ ನಡುವೆ ಖರ್ಗೆ ಅವರಿಗೆ ಬೆದರಿಕೆ ಕರೆಗಳೂ ಬಂದಿತ್ತು. ಈ ಬೆಳವಣಿಗೆ ನಡುವೆ ಸರ್ಕಾರ ಅನುಮತಿ ಕಡ್ಡಾಯ ಆದೇಶ ಹೊರಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ...

ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ...

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ–2025’; ಕೃತಿಗಳಿಗೆ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು...