ಆರ್‌ಎಸ್‌ಎಸ್ ಕಾನೂನಾತ್ಮಕ ಅಸ್ತಿತ್ವ ಮತ್ತು ಹೊಣೆಗಾರಿಕೆಗಳೇನು? ಬಿ.ಎಲ್. ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಕಾನೂನಾತ್ಮಕ ಅಸ್ತಿತ್ವದ ಕುರಿತು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರವಾಗಿ ತಿರುಗೇಟು ನೀಡಿದ್ದಾರೆ. ಸಂಘದ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಪ್ರಿಯಾಂಕ್ ಖರ್ಗೆ ನೇರವಾಗಿ ಪ್ರಶ್ನಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸುದೀರ್ಘವಾದ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, “ಆರ್‌ಎಸ್‌ಎಸ್ ಎಂಬ ಸಂಘಟನೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಯಾರೂ ಪ್ರಶ್ನಿಸುತ್ತಿಲ್ಲ. ಬದಲಾಗಿ ಅದು ಯಾವ ಕಾನೂನಿನ ಅಡಿಯಲ್ಲಿ ಅಸ್ತಿತ್ವದಲ್ಲಿದೆ ಮತ್ತು ಯಾವ ಕಾನೂನಾತ್ಮಕ ಗುರುತಿನೊಂದಿಗೆ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದೇ ಅಸಲಿ ಪ್ರಶ್ನೆ” ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ನೂರು ವರ್ಷಗಳ ಇತಿಹಾಸವಿದೆ ಎಂದು ಹೇಳಿಕೊಳ್ಳುವ, ಲಕ್ಷಾಂತರ ಸದಸ್ಯರಿದ್ದಾರೆ ಎನ್ನುವ, ‘ದಕ್ಷಿಣೆ’ ಹೆಸರಿನಲ್ಲಿ ನಿಧಿ ಸಂಗ್ರಹಿಸುವ, ಆಸ್ತಿ-ಪಾಸ್ತಿಗಳನ್ನು ಹೊಂದಿರುವ, ದೇಶಾದ್ಯಂತ ಚಟುವಟಿಕೆ ನಡೆಸುವ ಹಾಗೂ ರಾಜಕೀಯ ವಿಷಯಗಳ ಮೇಲೆ ಪ್ರಭಾವ ಬೀರುವ ಸಂಘಟನೆಯೊಂದು ನೋಂದಣಿ ಮತ್ತು ಆರ್ಥಿಕ ಪಾರದರ್ಶಕತೆಯ ಪ್ರಶ್ನೆ ಬಂದಾಗ ‘ನಮ್ಮ ಅಸ್ತಿತ್ವವೇ ನಮಗೆ ಸಾಕ್ಷಿ’ ಎಂದು ಹೇಳಿ ಜಾರಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಬಿ.ಎಲ್. ಸಂತೋಷ್ ಅವರಿಗೆ ಪ್ರಿಯಾಂಕ್ ಖರ್ಗೆ ಪ್ರಮುಖ ಆರು ಪ್ರಶ್ನೆಗಳನ್ನು ಕೇಳಿದ್ದಾರೆ. “ಆರ್‌ಎಸ್‌ಎಸ್‌ನ ಖಚಿತ ಕಾನೂನಾತ್ಮಕ ಸ್ಥಾನಮಾನ ಏನು? ಕಾನೂನಿನ ಪ್ರಕಾರ ಈ ಸಂಘಟನೆಯನ್ನು ಯಾರು ಪ್ರತಿನಿಧಿಸುತ್ತಾರೆ? ಸಂಘಟನೆಯ ಆಸ್ತಿಪಾಸ್ತಿಗಳು ಯಾರ ಹೆಸರಿನಲ್ಲಿವೆ? ಬ್ಯಾಂಕ್ ಖಾತೆಗಳನ್ನು ಯಾರ ಹೆಸರಿನಲ್ಲಿ ನಿರ್ವಹಿಸಲಾಗುತ್ತಿದೆ? ಸಾರ್ವಜನಿಕರಿಂದ ಸಂಗ್ರಹಿಸುವ ದೇಣಿಗೆ ಮತ್ತು ದಕ್ಷಿಣೆಗೆ ಇರುವ ಕಾನೂನು ಚೌಕಟ್ಟು ಯಾವುದು? ಹಾಗೂ ತನಿಖೆಗೊಳಪಟ್ಟ ಆಡಿಟ್ ಲೆಕ್ಕಪತ್ರಗಳು ಎಲ್ಲಿವೆ?” ಎಂದು ಅವರು ಸವಾಲು ಹಾಕಿದ್ದಾರೆ.

“ನೂರು ವರ್ಷ ಪೂರೈಸಿರುವ ಮತ್ತು ದೇಶದ ಭವಿಷ್ಯವನ್ನೇ ನಿರ್ಧರಿಸುತ್ತೇವೆ ಎಂದು ಪ್ರತಿಪಾದಿಸುವ ಸಂಘಟನೆಯೊಂದು ಈ ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗಬೇಕು” ಎಂದು ಸಚಿವರು ಪ್ರತಿಪಾದಿಸಿದ್ದಾರೆ.

“ನಾವು ಅಸ್ತಿತ್ವದಲ್ಲಿದ್ದೇವೆ ಎನ್ನುವುದು, ನೀವು ಯಾರಿಗೆ ಹೊಣೆಗಾರರು ಎಂಬ ಪ್ರಶ್ನೆಗೆ ಉತ್ತರವಾಗಲಾರದು. ಸಂವಿಧಾನಾತ್ಮಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆ ಎಷ್ಟು ದೊಡ್ಡದಾಗುತ್ತದೆಯೋ, ಅಷ್ಟೇ ಪ್ರಮಾಣದಲ್ಲಿ ಅದರ ಪಾರದರ್ಶಕತೆಯ ಹೊಣೆಗಾರಿಕೆಯೂ ಹೆಚ್ಚಾಗಬೇಕು. ಆ ಕಾರಣಕ್ಕಾಗಿ ಆರ್‌ಎಸ್‌ಎಸ್ ತನ್ನ ಕಾನೂನಾತ್ಮಕ ಗುರುತು ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಬಹಿರಂಗಪಡಿಸಲು ಏಕೆ ಹಿಂಜರಿಯುತ್ತಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ವಿಚಾರಣೆಯಿಲ್ಲದೆ 5 ವರ್ಷಗಳಿಂದ ಜೈಲು: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ಮತ್ತೆ ವಜಾ

2020ರ ದೆಹಲಿ ಗಲಭೆ ವಿಚಾರದಲ್ಲಿ ಜೈಲು ಸೇರಿರುವ ವಿದ್ಯಾರ್ಥಿ ನಾಯಕರಾದ ಉಮರ್...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...