ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

Date:

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ ಸೂಚನೆ ನೀಡಿದ್ದ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು‌ ರಾಜ್ಯ ಬಿಜೆಪಿ ನಾಯಕರು‌ ಒತ್ತಾಯಿಸುತ್ತಿದ್ದಾರೆ. ಆದರೆ, ಅವರು ಹೇಳಿದ ತಕ್ಷಣ ಅಧಿಕಾರಿಯನ್ನು ಅಮಾನತು ಮಾಡೋಕೆ‌ ಆಗಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಬಿಜೆಪಿಯವರು ಹೇಳಿದಂತೆ ನಾವು ಕೇಳಲು ಅಥವಾ ಆಡಳಿತ ನಡೆಸಲು ಸಾಧ್ಯವಿಲ್ಲ. ಅವರ ಮಾತಿಗೆ ಮಣಿದು ಅಧಿಕಾರಿಯನ್ನು ಸಸ್ಪೆಂಡ್ ಮಾಡುವ ಪ್ರಶ್ನೆಯೇ ಇಲ್ಲ. ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಸೂಚನೆ ಕೊಡೋದೆ ತಪ್ಪಾ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಬಿಜೆಪಿಯವರು ಗೃಹ ಸಚಿವರಾಗಿದ್ದಾಗ ಅವರೇನು ಪೊಲೀಸ್ ಇಲಾಖೆಗೆ ಸೂಚನೆಗಳನ್ನು ನೀಡಿರಲಿಲ್ಲವೇ? ಆರ್. ಅಶೋಕ್ ಅವರು ಗೃಹ ಸಚಿವರಾಗಿದ್ದಾಗ ಸಭೆಗಳನ್ನು ನಡೆಸಿರಲಿಲ್ಲವೇ? ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಯಾವ ನಿಯಮಗಳು ಜಾರಿಯಲ್ಲಿದ್ದವೋ, ಈಗಲೂ ಅದೇ ನಿಯಮಗಳು ಜಾರಿಯಲ್ಲಿವೆ” ಎಂದು‌ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಗಣೇಶೋತ್ಸವ ಮತ್ತು ಈದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿವೆ. ಹಬ್ಬಗಳ ವಿಚಾರದಲ್ಲಿ ವಿರೋಧ ಪಕ್ಷಗಳು ಅನಗತ್ಯ ರಾಜಕೀಯ ಮಾಡದೆ, ಜನರು ಶಾಂತಿಯುತವಾಗಿ ಹಬ್ಬ ಆಚರಿಸಲು ಅವಕಾಶ ನೀಡಬೇಕು” ಎಂದಿದ್ದಾರೆ.

“ಮೆರವಣಿಗೆಗೆ ಹಲವು ಮಾರ್ಗಗಳಿರುವ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸುವುದು ಅಗತ್ಯ. ನಿರ್ದಿಷ್ಟ ಸೂಕ್ಷ್ಮ ಪ್ರದೇಶದಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗಬಹುದಾದ ಸಮಸ್ಯೆಗಳನ್ನೂ ಪರಿಗಣಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮೈಸೂರಿನ ನಿರುದ್ಯೋಗಿ ರಾಜಕಾರಣಿಯೊಬ್ಬರು ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಹೇಳುತ್ತಿದ್ದಾರೆ. ಅವರದೇ ಸರ್ಕಾರವಾಗಿರಲಿ, ಬೇರೆ ಯಾರ ಸರ್ಕಾರವಾಗಿರಲಿ, ಯಾರಾದರೂ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದು ಹೇಳಿದರೆ ಪೊಲೀಸರು ಸುಮ್ಮನೆ ಇರುತ್ತಾರೆಯೇ” ಎಂದು ಪ್ರಿಯಾಂಕ್ ಖರ್ಗೆ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.

ಟಿ. ನರಸೀಪುರದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆ ನಡೆಸಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶ ಮೆರವಣಿಗೆ ಮತ್ತು ಪಟಾಕಿ ಸಿಡಿಸುವ ವಿಚಾರದಲ್ಲಿ ಹಿಂದುತ್ವ ಗುಂಪುಗಳಿಗೆ ಖಡಕ್ ಸೂಚನೆ ನೀಡಿದ್ದರು. “ಮಸೀದಿ ಮುಂದೆ ಅನಗತ್ಯವಾಗಿ ಮೆರವಣಿಗೆ ನಿಲ್ಲಿಸಿ, ಪಟಾಕಿ ಸಿಡಿಸಿ, ಪ್ರಚೋದನಾಕಾರಿ ಘೋಷಣೆ ಕೂಗಿದರೆ ‘ಗ್ರಹಚಾರ ಬಿಡಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದರು.

ಅವರು ಎಚ್ಚರಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಅದನ್ನೇ ಬಂಡವಾಳ ಮಾಡಿಕೊಂಡ ಬಿಜೆಪಿಗರು ಕೋಮು ರಾಜಕಾರಣ ಮಾಡಲು ಯತ್ನಿಸಿದ್ದರು. ಭಾನುವಾರ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಯಧುವೀರ್ ಒಡೆಯಾರ್, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಟಿ. ನರಸೀಪುರ ಪೊಲೀಸ್ ಠಾಣೆ ಬಳಿ ಜಮಾಯಿಸಿ ದಾಂಧಲೆ ನಡೆಸಿದ್ದರು. ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...