ಹಿಂದಿ ಹೇರಿಕೆ ಪರ ಹೇಳಿಕೆ: ರೊಚ್ಚಿಗೆದ್ದ ಕರವೇಯಿಂದ ಶೋಭಾ ಕರಂದ್ಲಾಜೆ ಪ್ರತಿಕೃತಿ ದಹನಕ್ಕೆ ಯತ್ನ

Date:

ಕರ್ನಾಟಕ ಸರ್ಕಾರ ಈ ವರ್ಷದಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ವ್ಯವಸ್ಥೆ ಜಾರಿಗೆ ತಂದಿರುವುದರ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಿ, ಸಚಿವೆಯ ಪ್ರತಿಕೃತಿ ದಹಿಸಲು ಯತ್ನಿಸಿತು.

- Advertisement -

ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿ ಸಮಾವೇಶಗೊಂಡ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಘಟಕದ ಮಹಿಳಾ ಕಾರ್ಯಕರ್ತರು ಶೋಭಾ ಕರಂದ್ಲಾಜೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿ ಹೇರಿಕೆ ಪರವಾಗಿ ಮಾತನಾಡುತ್ತಿರುವ ಬಿಜೆಪಿಯ ಬಿ ವೈ ವಿಜಯೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್ ಅಶೋಕ, ಶ್ರೀರಾಮುಲು, ಸುರೇಶ್‌ ಕುಮಾರ್‌ ಇನ್ನಿತರರ ವಿರುದ್ಧವೂ ಘೋಷಣೆಗಳು ಮೊಳಗಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರವೇ ಮಹಿಳಾ ಘಟಕದ ಬೆಂಗಳೂರು ನಗರ ಜಿಲ್ಲಾಧ್ಯಕ್ಷೆ ಶ್ವೇತಾ ಮೋಹನ್, “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಿಂದಿ ಪರವಾಗಿ ಮಾತನಾಡುತ್ತಿದ್ದಾರೆ. ಅವರು ಮೊದಲು ಕನ್ನಡ ನುಡಿಯನ್ನು ಪ್ರೀತಿಸುವುದನ್ನು ಕಲಿಯಲಿ. ಅವರಿಗೆ ಮತ ಹಾಕಿ ಗೆಲ್ಲಿಸಿರುವುದು ಕನ್ನಡದ ಜನತೆ, ಹಿಂದಿವಾಲಾಗಳಲ್ಲ” ಎಂದರು.

“ಕಳೆದ ವರ್ಷ ಪರೀಕ್ಷೆಗಳಲ್ಲಿ ಹಿಂದಿಯ ಕಾರಣಕ್ಕೆ 1,40,000 ವಿದ್ಯಾರ್ಥಿಗಳು ಫೇಲಾಗಿ ಒಂದು ವರ್ಷ ಕಳೆದುಕೊಂಡರು. ಆಗ ಶೋಭಾ ಕರಂದ್ಲಾಜೆ ಎಲ್ಲಿಗೆ ಹೋಗಿದ್ದರು? ಕನ್ನಡದ ವಿದ್ಯಾರ್ಥಿಗಳು ಫೇಲಾಗಿ ಭವಿಷ್ಯ ಹಾಳು ಮಾಡಿಕೊಳ್ಳಲಿ ಎಂಬುದು ಅವರ ಉದ್ದೇಶವೇ? ಇಂಥ ವಿಕೃತ ಆಲೋಚನೆ ಅವರಿಗೆ ಹೇಗೆ ಬಂತು” ಎಂದು ಪ್ರಶ್ನಿಸಿದರು.

ಭಾರತೀಯ ಜನತಾ ಪಕ್ಷದ ಅಧಿಕಾರವಿರುವ ರಾಜ್ಯಗಳಲ್ಲಿ ಇಂಗ್ಲಿಷ್‌ ಮತ್ತು ಹಿಂದಿ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಅಲ್ಲಿನ ಮಕ್ಕಳು ಎರಡು ಭಾಷೆ ಕಲಿಯುತ್ತಿರುವಾಗ ಕರ್ನಾಟಕದ ಮಕ್ಕಳು ಯಾಕೆ ಮೂರನೇ ಭಾಷೆಯ ಹೊರೆಯನ್ನು ಹೊತ್ತುಕೊಳ್ಳಬೇಕು? ಬಿಜೆಪಿ ನಾಯಕರಿಗೆ ಈ ಸಾಮಾನ್ಯ ಜ್ಞಾನವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಶೋಭಾ ಕರಂದ್ಲಾಜೆಯವರು ರೈಲ್ವೆ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದಾಗ ಯಾವ ರಾಜ್ಯದ ಪ್ರವಾಸದಲ್ಲಿದ್ದರು ಎಂದು ಗುಡುಗಿದರು.

ಇದನ್ನೂ ಓದಿ: ಹಿಂದಿ ಹೇರಿಕೆ ಅಷ್ಟೊಂದು ದೊಡ್ಡ ವಿಚಾರವಾ? ಹೌದು, ಬಹಳ ದೊಡ್ಡದು ಏಕೆಂದರೆ…

ಶೋಭಾ ಕರಂದ್ಲಾಜೆ ರಾಜ್ಯ ಬಿಟ್ಟು ತೊಲಗಿ, ಹಿಂದಿ ಗುಲಾಮರಿಗೆ ಧಿಕ್ಕಾರ, ಹಿಂದಿ ಹೇರಿಕೆಗೆ ಧಿಕ್ಕಾರ ಇತ್ಯಾದಿ ಘೋಷಣೆಗಳನ್ನು ಕೂಗಿ ಕಾರ್ಯಕರ್ತೆಯರು ತಮ್ಮ ಆಕ್ರೋಶ ಹೊರಹಾಕಿದರು.

ಭಾರತೀಯ ಜನತಾ ಪಕ್ಷದವರು ಇದೇ ರೀತಿ ತಮ್ಮ ನಾಡವಿರೋಧಿ ನೀತಿ ಮುಂದುವರೆಸಿದರೆ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ನಡೆಸಬೇಕಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಸಿದರು.

ಶೋಭಾ ಕರಂದ್ಲಾಜೆ ಪ್ರತಿಕೃತಿ ದಹನಕ್ಕೆ ಯತ್ನ ನಡೆದಾಗ, ಪ್ರತಿಕೃತಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತೆಯರನ್ನು ಬಂಧಿಸಿ ಕರೆದೊಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...