ಕಾಂಗ್ರೆಸ್‌ ಕಾರ್ಯಕರ್ತರಿಂದ ರವಿ ಹಂಜ್‌, ವಿಶ್ವೇಶ್ವರ ಭಟ್‌ ವಿರುದ್ಧ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

Date:

12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ನಾಡಿನ ಸಾಂಸ್ಕೃತಿಕ ಪರಂಪರೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಮೌಲ್ಯಗಳಿಗೆ ಧಕ್ಕೆ ತರುತ್ತಿರುವ ರವಿ ಹಂಜ್ ಮತ್ತು ಅಡ್ಡಾಂಡ ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ, ಅವರನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಸಮಾನತೆ, ಮಾನವೀಯತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಇಡೀ ವಿಶ್ವಕ್ಕೆ ಸಾರಿದ ವಿಶ್ವಗುರು ಬಸವಣ್ಣನವರು ಹಾಗೂ ಸತ್ಯ, ಅಹಿಂಸೆ ಮತ್ತು ಶಾಂತಿಯ ಮಾರ್ಗದ ಮೂಲಕ ಜಗತ್ತಿಗೆ ಮಾದರಿಯಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಮಾನಿಸುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಆತಂಕವಿದೆ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾನೂನಿನ ಚೌಕಟ್ಟಿನಲ್ಲಿ ಗಡಿಪಾರು ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಕಳೆದ ಏಳು ದಿನಗಳಿಂದ ಕನಿಷ್ಟ ಗೌರವ ಧನಕ್ಕಾಗಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಇಂದು ಫ್ರೀಡಂ ಪಾರ್ಕಿನಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷವಾಕ್ಯ ಕೂಗಿದರು. 15,000 ಕೊಡದ ಹೊರತು ಕದಲುವುದಿಲ್ಲ,...

ಅರಬ್ ಜನಾದೇಶ ಬದಿಗಿಟ್ಟು ನೆತನ್ಯಾಹು ಕೈಹಿಡಿಯಲು ಹೊರಟ ಐಸೆನ್‌ಕೋಟ್;...

ಇಸ್ರೇಲ್‌ನ ತ್ರಿಶಂಕು ಸಂಸತ್ತಿನಲ್ಲಿ ಅಧಿಕಾರ ಹಿಡಿಯಲು ವಿರೋಧ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ತಮ್ಮ ಮಾತನ್ನೇ ನುಂಗಿ ಹಂಗಾಮಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಮೈತ್ರಿ ಮಾತುಕತೆಗೆ ಮುಂದಾಗಿದ್ದಾರೆ. 19 ಸ್ಥಾನ ಗೆದ್ದ...

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!...

ಮೋದಿ ಸರ್ಕಾರ ಬ್ರಿಟಿಷರಂತೆ ಪೊಲೀಸ್‌ ಮತ್ತು ಪೊಲೀಸ್‌ ವೇಷದ ಆರ್‌ ಎಸ್‌ ಎಸ್‌, ಹಿಂದುತ್ವವಾದಿಗಳ ಹಿಂದೆ ಅವಿತು ಭಾರತದ ಯುವಜನರ ಧಮನಕ್ಕೆ ಇಳಿದಿದೆ. ಗ್ಯಾನೇಶ್‌ ಕುಮಾರ್‌ ನನ್ನು ಮೋದಿ ಮತ್ತು ಅಮಿತ್‌ ಶಾ,...

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್, ಎ. ಆನಂದ್, ಕುಶಾಲ್ ಹರವೇಗೌಡ, ಸಾಯಿ ನವೀನ್, ಪುಟ್ಟರಾಜು, ಆನಂದ್ ಕುಮಾರ್, ಹೋಬಳೇಶ್, ನಿರಂಜನ್, ಬಾಲಾಜಿ ಡಿ., ಪವನ್, ರಾಮಾಂಜನೇಯ, ಸುರೇಶ್ ಹಾಗೂ ಮಂಜು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬಸವಣ್ಣ ಮತ್ತು ಗಾಂಧೀಜಿಯವರ ಅಭಿಮಾನಿಗಳು ಭಾಗವಹಿಸಿದ್ದರು.

ಪ್ರತಿಭಟನೆಯ ವೇಳೆ ರವಿ ಹಂಜ್ ಮತ್ತು ಅಡ್ಡಾಂಡ ಕಾರ್ಯಪ್ಪ ಅವರ ಪ್ರತಿಕೃತಿಗಳನ್ನು ದಹಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿ, ನಾಡಿನ ಮಹಾನ್ ಚೇತನಗಳ ಗೌರವ ಮತ್ತು ಘನತೆಯನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

ಬಸವಣ್ಣನವರ ಅವಹೇಳನ; ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವಪರ ಸಂಘಟನೆಗಳ ಆಗ್ರಹ

ಕರ್ನಾಟಕ ಸಾಂಸ್ಕೃತಿಕ ನಾಯಕ "ವಿಶ್ವಗುರು" ಬಸವಣ್ಣನವರನ್ನು ಅವಹೇಳನ ಮಾಡಿದ ಇಂಗ್ಲಿಷ್ ಲೇಖಕ...