ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾ ಮೆರವಣಿಗೆ ಪ್ರಕರಣ: ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ 2022ರಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಪಿ ಕೆ ಮಿಶ್ರಾ ನೇತೃತ್ವದ ಪೀಠ ಕರ್ನಾಟಕ ಸರ್ಕಾರ ಹಾಗೂ ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಎಂಬಿ ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ  ರಾಜ್ಯ ಹೈಕೋರ್ಟ್ 10 ಸಾವಿರ ರೂ ದಂಡ ವಿಧಿಸಿ ಮಾರ್ಚ್‌ 6ರಂದು ವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ನಿರ್ದೇಶಿಸಿದ್ದ ಆದೇಶವನ್ನು ಕೂಡ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿಗಳ ಅಸ್ತಿಭಾರದ ಮೇಲೆ ಕಟ್ಟಿದ ಅಹಿಂದ ಬಜೆಟ್

2022ರಲ್ಲಿ ಪ್ರಕರಣ ದಾಖಲಾಗಿದ್ದು, ಅಂದು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿರುವ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಸಿದ್ದರಾಮಯ್ಯ ಒಳಗೊಂಡ ಕಾಂಗ್ರೆಸ್ ನಾಯಕರು ಮೆರವಣಿಗೆ ಮೂಲಕ ಮುತ್ತಿಗೆ ಹಾಕಿದ್ದರು.

ಶೇ.40 ಲಂಚ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕಿದ್ದರು.

ರಸ್ತೆಗಳನ್ನು ಬಂದ್ ಮಾಡಿ, ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...