ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ವಿದ್ಯಾರ್ಥಿಗಳು, ಯುವಜನ ಸಂಘಟನೆಯ ಕಾರ್ಯಕರ್ತರನ್ನು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಇಂದು ದೆಹಲಿ ಸೇರಿದಂತೆ ದೇಶ ವಿವಿಧ ಭಾಗಗಳಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರು | SIR ವಿರುದ್ಧ ನಾಳೆ ಬೃಹತ್ ಪ್ರತಿರೋಧ ಸಮಾವೇಶ: ನೂರ್ ಶ್ರೀಧರ್
ಪ್ರತಿಭಟನೆ ಆರಂಭವಾಗುವುದಕ್ಕೂ ಮುನ್ನವೇ ಹಲವಾರು ನಾಯಕರನ್ನು ಬಂಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಈ ಸರ್ವಾಧಿಕಾರ ಧೋರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಬೆಂಗಳೂರಿನಲ್ಲೂ ಎಸ್‌ಐಆರ್ ವಿರುದ್ಧ ಇಂದು ಪ್ರತಿಭಟನೆ ನಡೆದಿದೆ.




