ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

Date:

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್‌ಡಿಆರ್‌ಎಫ್‌) ಮಾನದಂಡಗಳನ್ವಯ ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ.

- Advertisement -

ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್‌ ಸಚಿವಾಲಯದ ತಂಡದೊಂದಿಗೆ ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದ ಅವರು, ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜ್ಯದ 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವೈಜ್ಞಾನಿಕ ಮೌಲ್ಯಮಾಪನದ ಮೂಲಕ ಬರಪೀಡಿತ ತಾಲ್ಲೂಕುಗಳನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರವು ನೆರವಿಗೆ ಧಾವಿಸಬೇಕು. ರೈತರು ಕಂಗಾಲಾದರೆ ಕೃಷಿ ಚಟುವಟಿಕೆಗಳಷ್ಟೇ ಅಲ್ಲದೆ, ಒಟ್ಟಾರೆ ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಉಂಟಾಗಲಿದೆ. ಹೀಗಾಗಿ ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.

ಕೃಷ್ಣಾ ಜಲಾನಯನ ಪ್ರದೇಶವನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆ ಉಂಟಾಗಿದೆ. ನಗರ ಪ್ರದೇಶಗಳಲ್ಲೂ ನೀರಿನ ಸಮಸ್ಯೆ ಎದುರಾಗಿದೆ. ಇಂತಹ ಪರಿಸ್ಥಿತಿಯ ನಡುವೆಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಕೇಂದ್ರ ಜಲ ಆಯೋಗ ಆದೇಶ ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ರಾಜ್ಯ ಸರ್ಕಾರವು ರೈತರಿಗೆ ತಾತ್ಕಾಲಿಕ ಪರಿಹಾರವಾಗಿ ₹2,500 ಘೋಷಿಸಿದೆ. ಆದರೆ, ಬರದ ತೀವ್ರತೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವಿನ ಅಗತ್ಯವಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಧಿಕಾರಿಗಳೂ ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಮಂತ್ರಿಯವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬರ ಪರಿಸ್ಥಿತಿಯ ಕುರಿತು ಮುನ್ನೆಚ್ಚರಿಕೆ ನೀಡಿದ್ದರು. ಅದರಂತೆ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿತ್ತು. ರೈತರಿಗೂ ಬಿತ್ತನೆಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡಲಾಗಿತ್ತು ಎಂದು ತಿಳಿಸಿದರು.

ತಮ್ಮ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಜನರು ಇಷ್ಟೊಂದು ಸಂಕಷ್ಟಕ್ಕೆ ಸಿಲುಕಿರುವುದನ್ನು ಕಂಡಿಲ್ಲ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಜನಪ್ರತಿನಿಧಿಗಳು ಹಾಗೂ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿತ್ತು. ಅಧಿವೇಶನದಲ್ಲಿ 150 ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದರು ಎಂದು ಹೇಳಿದರು.

ಬರದ ಪರಿಣಾಮವಾಗಿ ಕಬ್ಬು ಬೆಳೆಗಾರರು ಹೆಚ್ಚಿನ ಬೆಲೆಗೆ ಒತ್ತಾಯಿಸುತ್ತಿದ್ದಾರೆ. ಹಾಲು ಉತ್ಪಾದಕರು ಪ್ರತಿ ಲೀಟರ್‌ಗೆ ಕನಿಷ್ಠ ₹10 ದರ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ. ರೈತರು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ಮುಖ್ಯಮಂತ್ರಿಗಳ ಮನವಿಗೆ ಪ್ರತಿಕ್ರಿಯಿಸಿದ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು, ತಂಡವು ಮೂರು ದಿನಗಳ ಕಾಲ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಲಿದೆ. ಈ ವೇಳೆ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಅಗತ್ಯ ದತ್ತಾಂಶಗಳನ್ನು ಸಂಗ್ರಹಿಸಿ, ವಸ್ತುನಿಷ್ಠ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಅಭಿವೃದ್ಧಿ ಆಯುಕ್ತೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು,...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...