ದಾವಣಗೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ತುಮಕೂರಿನ ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಾಗರಾಜು (58) ಆತ್ಮಹತ್ಯೆ ಮಾಡಿಕೊಂಡ ಪಿಎಸ್‌ಐ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ಕೊಠಡಿ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೆಯೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆಗಿದ್ದರು. ಆತ್ಮಹತ್ಯೆಗೂ ಮುನ್ನ ನಾಗರಾಜ್ ಅವರು ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇಂದು ಲಾಡ್ಜ್‌ನಲ್ಲಿ ದುರ್ವಾಸನೆ ಬಂದಿದೆ. ಬಳಿಕ ಲಾಡ್ಜ್ ಸಿಬ್ಬಂದಿ ಹೋಗಿ ನೋಡಿದಾಗ ಇನ್ಸ್‌ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವುವುದು ಬೆಳಕಿಗೆ ಬಂದಿದೆ. ಆದರೆ ನಾಗರಾಜ ಅವರು ದಾವಣಗೆರೆಯಿಂದ ಬಂದು ತಮಕೂರಿನ ಲಾಡ್ಜ್’ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದೇಕೆ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ
ಆತ್ಮಹತ್ಯೆ ಮಾಡಿಕೊಂಡಿರುವ ಪಿಎಸ್‌ಐ ಅವರು ಒಂದುವರೆ ವರ್ಷದಲ್ಲೇ ಕರ್ತವ್ಯದಿಂದ ನಿವೃತ್ತಿಯಾಗಬೇಕಿತ್ತು. ಜುಲೈ ಒಂದರಂದ ಮನೆಯಿಂದ ಹೊರ ಹೋಗಿದ್ದರು. ಮನೆ ಬಿಟ್ಟು ಹೋದ ಬಳಿಕ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದರು. ನಾಪತ್ತೆ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ನಾಗರಾಜ್ ಅವರ ಪತ್ನಿ ದೂರು ದಾಖಲಿಸಿದ್ದರು.
