PSI ನೇಮಕಾತಿ ಹಗರಣ: ಮೈಸೂರು ಜೈಲಿಗೆ ಆರೋಪಿಯನ್ನು ವರ್ಗಾಯಿಸಿದ್ದ ಆದೇಶ ರದ್ದು

Date:

ಪೊಲೀಸ್‌ ಸಬ್ ಇನ್ಸ್​​ಪೆಕ್ಟರ್​ (PSI) ನೇಮಕಾತಿ ಹಗರಣದ ಕಿಂಗ್‌ಪಿನ್ ಎನ್ನಲಾದ ಆರ್.ಡಿ. ಪಾಟೀಲ್‌ನನ್ನು (ರುದ್ರಗೌಡ ಪಾಟೀಲ್) ಜೈಲಿನಿಂದ ಜೈಲಿಗೆ ಸ್ಥಳಾಂತರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಆರೋಪಿ ಪಾಟೀಲ್‌ ಮರಳಿ ಕಲಬುರಗಿ ಜೈಲಿಗೆ ಸ್ಥಳಾಂತರಿಸುವಂತೆ ಸೂಚಿಸಿದೆ.

- Advertisement -

ಪ್ರಮುಖ ಆರೋಪಿಯಾಗಿರುವ ಪಾಟೀಲ್‌ನನ್ನು ಭದ್ರತೆಯ ಕಾರಣಕ್ಕಾಗಿ  ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರಿಗೆ ವರ್ಗಾಯಿಸಿ ವಿಚಾರಣಾ ನ್ಯಾಯಾಲಯವು ಆದೇಶಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಆರ್.ಡಿ. ಪಾಟೀಲ್ ಪರವಾಗಿ ಆತನ ಪತ್ನಿ ಶೋಭಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಆ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ. “ಒಬ್ಬ ವಿಚಾರಣಾ ಕೈದಿಯನ್ನು ಒಂದು ಜೈಲಿನಿಂದ ಮತ್ತೊಂದು ಜೈಲಿಗೆ ವರ್ಗಾವಣೆ ಮಾಡುವ ಮುನ್ನ ಆತನ ವಾದವನ್ನು ಆಲಿಸಬೇಕು. ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆ, ಏಕಪಕ್ಷೀಯವಾಗಿ ವರ್ಗಾವಣೆ ಮಾಡುವುದು ನೈಸರ್ಗಿಕ ನ್ಯಾಯತತ್ವಗಳ ಉಲ್ಲಂಘನೆಯಾಗುತ್ತದೆ” ಎಂದು ಪೀಠ ಹೇಳಿದೆ.

“ಕೇವಲ ‘ಭದ್ರತೆ’ಯ ಅಸ್ಪಷ್ಟ ಕಾರಣಗಳನ್ನು ಮುಂದಿಟ್ಟು ವರ್ಗಾವಣೆ ಮಾಡುವುದು ಸರಿಯಲ್ಲ. ಈ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಸಮರ್ಪಕ ವಿಚಾರಣೆ ನಡೆಸದೆ, ಆದೇಶ ನೀಡಿರುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ.

ಈ ಲೇಖನ ಓದಿದ್ದೀರಾ?: ಶಿಲಾಯುಗ’ದಿಂದ ‘ಸುವರ್ಣಯುಗ’; ಇರಾನ್ ಮೇಲಿನ ಯುದ್ಧದಲ್ಲಿ ಬದಲಾದ ಟ್ರಂಪ್ ವರಸೆ

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ, ಸದ್ಯ ಮೈಸೂರು ಜೈಲಿನಲ್ಲಿರುವ ಆರ್.ಡಿ. ಪಾಟೀಲ್‌ನನ್ನು ಕೂಡಲೇ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಬೇಕಿದೆ.

ಪ್ರಕರಣದ ಹಿನ್ನೆಲೆ:

2022ರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್‌ಡಿಎ ಮತ್ತು ಎಸ್‌ಡಿಎ ನೇಮಕಾತಿ ಪರೀಕ್ಷೆಗಳಲ್ಲಿ ಬ್ಲೂಟೂತ್ ಸಾಧನ ಹಾಗೂ ವಾಕಿ-ಟಾಕಿ ಬಳಸಿ ಅಕ್ರಮ ಎಸಗಿದ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ, ಕಲಬುರಗಿಯ ಕ್ಲಾಸ್‌ ಒನ್‌ ಸಿವಿಲ್‌ ಗುತ್ತಿಗೆದಾರನಾಗಿದ್ದ ಪಾಟೀಲ್, ಹತ್ತಾರು ಅಭ್ಯರ್ಥಿಗಳಿಗೆ ನಕಲು ಮಾಡಲು ಎಲೆಕ್ಟ್ರಾನಿಕ್ ಸಾಧನಗಳನ್ನು ಪೂರೈಸಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾನೆ ಎಂದೂ ಆರೋಪಿಸಲಾಗಿತ್ತು.

 ಇದೇ ಆರೋಪದ ಮೇಲೆ ಸಿಐಡಿ ವಿಶೇಷ ತಂಡವು 2023ರ ನವೆಂಬರ್‌ನಲ್ಲಿ ಆರ್.ಡಿ. ಪಾಟೀಲ್‌ನನ್ನು ಬಂಧಿಸಿತ್ತು. ಆತನ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ (KCOCA – ಕೋಕಾ) ಅಡಿ ಪ್ರಕರಣ ದಾಖಲಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...