11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಗೆ ಸೂರ್ಯಕಾಂತಿ ಖರೀದಿ: ಸಚಿವ ಶಿವಾನಂದ ಪಾಟೀಲ ಆದೇಶ

Date:

ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆದು ಪ್ರತಿ ಕ್ವಿಂಟಲ್‌ ಸೂರ್ಯಕಾಂತಿಯನ್ನು ₹7,721ಕ್ಕೆ ಖರೀದಿಸುವಂತೆ ನಿರ್ದೇಶನ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ.

ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಜತೆಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಮತ್ತು ಖರೀದಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸಿದ್ದತೆ ಮಾಡಿಕೊಂಡು ಪ್ರಕ್ರಿಯೆ ಆರಂಭಿಸಬೇಕೆಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೂಡಲೇ 56,432 ಹುದ್ದೆಗಳ ಅಧಿಸೂಚನೆಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಗ್ರಹ

ರೈತರ ಹೆಸರಿನಲ್ಲಿ ವರ್ತಕರು ಮತ್ತು ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಖರೀದಿ ಪ್ರಗತಿಯ ವಿವರವನ್ನು ಪ್ರತಿದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...