ವೈಟ್ನರ್ ಅಡಿಯ ಅಕ್ಷರಗಳಿಗೆ ಟಾರ್ಚ್ ಹಾಕಿದ್ದು ಸಿದ್ದರಾಮಯ್ಯಗೆ ಶೋಭೆಯಲ್ಲ: ಕುಮಾರಸ್ವಾಮಿ

Date:

ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ‘ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ’ ಎಂದು ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, “ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಇದು ಮೂಲ ದಾಖಲೆ, ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ? ಅಥವಾ ಇನ್ನಾರಾದರೂ ಇದ್ದಾರಾ” ಎಂದು ಪ್ರಶ್ನಿಸಿದ್ದಾರೆ.

“ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ ಹೇಗೆ” ಎಂದು ಸಿಎಂ ಅವರ ಕಾಲೆಳೆದಿದ್ದಾರೆ.

“ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ ಶಿಶುಪಾಲನ ಹಾಗೆ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....