ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆ, ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ ಎಂದ ಡಿ ಕೆ ಶಿವಕುಮಾರ್

Date:

ಸಚಿವ ಸಂಪುಟ ಪುನಾರಚನೆ ಆಗುತ್ತದೆಯೋ ಅಥವಾ ನಾಯಕತ್ವ ಬದಲಾವಣೆ ಆಗುತ್ತದೆಯೋ ಎಂದು ಪತ್ರಕರ್ತರು ಕೇಳಿದಾಗ, “ಯಾರಾದರೂ ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸಿಟ್ಟಿನಿಂದಲೇ ಉತ್ತರಿಸಿದರು.

- Advertisement -

ದೆಹಲಿಯಿಂದ ಸೋಮವಾರ ಸಂಜೆ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿ, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ ಅಷ್ಟೇ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ಅವರು ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ, ಭಾನುವಾರ ನೀವು ಭೇಟಿ ಮಾಡಿದ್ದೀರಿ, ಈ ಬಗ್ಗೆ ಚರ್ಚೆ ಮಾಡಿದ್ದೀರಾ ಎಂದು ಕೇಳಿದಾಗ, “ನಾನು ದೆಹಲಿಗೆ ಹೋದಾಗೆಲ್ಲಾ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯ ವಿಚಾರವಾಗಿ ಅವರನ್ನು ಭೇಟಿ ಮಾಡಿಲ್ಲ. ಈ ವಿಚಾರ ಚರ್ಚಿಸಿಲ್ಲ. ನಾನು ಡಿಸಿಎಂ ಮಾತ್ರವಲ್ಲ, ಪಕ್ಷದ ಅಧ್ಯಕ್ಷನೂ ಆಗಿದ್ದೇನೆ. ಇಷ್ಟು ದಿನ ಅವರು ಬಿಹಾರ ಚುನಾವಣೆಯಲ್ಲಿ ನಿರತರಾಗಿದ್ದರು. ಹೀಗಾಗಿ ನಾನು ಅವರಿಗೆ ತೊಂದರೆ ನೀಡಿರಲಿಲ್ಲ. ಡಿ. 1ರಿಂದ ಸಂಸತ್ ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿದೆ” ಎಂದರು.

ಮೇಕೆದಾಟು ಯೋಜನೆ ಜಾರಿಗೆ ತಡ ಮಾಡುವುದಿಲ್ಲ

ನಿಮ್ಮ ದೆಹಲಿ ಭೇಟಿ ವೇಳೆ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಫಲಪ್ರದವಾಯಿತೇ ಎಂದು ಕೇಳಿದ್ದಕ್ಕೆ, “ನಾನು ಯಾವುದೇ ವರಿಷ್ಠ ನಾಯಕರನ್ನು ಭೇಟಿ ಮಾಡಿಲ್ಲ. ಮೇಕೆದಾಟು ಯೋಜನೆ ಪರ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ವಾದ ಮಂಡಿಸಿದ ವಕೀಲರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ನ್ಯಾಯಾಲಯ ನಮಗೆ ನಮ್ಮ ಯೋಜನೆ ಮುಂದುವರಿಸಲು, ತಮಿಳುನಾಡಿಗೆ ಅದರ ಪಾಲಿನ ನೀರನ್ನು ಪಡೆಯಲು ಹಾಗೂ ಕೇಂದ್ರ ಜಲ ಆಯೋಗಕ್ಕೆ ಯೋಜನೆಗೆ ಅನುಮತಿ ನೀಡುವ ಅಧಿಕಾರವನ್ನು ನೀಡಿ ಆದೇಶ ನೀಡಿದೆ. ಇದಕ್ಕೆ ಕಾಲಮಿತಿ ಇದ್ದು, ಈ ಕಾರಣಕ್ಕೆ ಸೋಮವಾರ ಬೆಳಗ್ಗೆ ವಕೀಲರಾದ ಶ್ಯಾಮ್ ದಿವಾನ್ ಅವರನ್ನು ಭೇಟಿ ಮಾಡಿದೆ. ಅವರ ಜತೆ ಕೃಷ್ಣಾ ಹಾಗೂ ಮಹದಾಯಿ ಯೋಜನೆ ವಿಚಾರವಾಗಿ ಚರ್ಚೆ ಮಾಡಿದೆ. ನಾಳೆ ಕಾವೇರಿ ನೀರವರಿ ನಿಗಮದ (ಸಿಎನ್ಎನ್ಎಲ್) ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿ ಈ ಯೋಜನೆ ಪ್ರಸ್ತಾವನೆ ಮಾಡಬೇಕು ಎಂದು ಚರ್ಚೆ ಮಾಡಲಾಗುವುದು. ಈ ವಿಚಾರದಲ್ಲಿ ಇನ್ನು ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸಿಎಂ ಕೂಡ ಪ್ರಧಾನಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ” ಎಂದು ತಿಳಿಸಿದರು.

“ಈ ಯೋಜನೆಗಾಗಿ ‘ನಮ್ಮ ನೀರು ನಮ್ಮ ಹಕ್ಕು’ ಎಂದು ನೂರಾರು ಕಿ.ಮೀ. ಹೆಜ್ಜೆ ಹಾಕಿದ್ದು, ಅನೇಕ ಪ್ರಕರಣಗಳು ನಮ್ಮ ವಿರುದ್ಧ ದಾಖಲಾಗಿವೆ. ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಕೈಗಾರಿಕೆಗಳಿಗೂ ನೀರು ಒದಗಿಸಲಾಗುವುದು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ. ನನ್ನ ಶ್ರಮಕ್ಕೆ ಈಗ ಫಲ ಸಿಗುತ್ತಿದೆ. ಈ ಯೋಜನೆ ಜಾರಿಗೆ ಏನೆಲ್ಲಾ ಮಾಡಬೇಕು ಎಂದು ವಕೀಲರು, ಕಾನೂನು ತಜ್ಞರ ಜತೆ ಚರ್ಚೆ ಮಾಡಿರುವೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮದ ವೇಳೆ ಅನೇಕ ನಿವೃತ್ತ ನ್ಯಾಯಾಧೀಶರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವೆ” ಎಂದು ಹೇಳಿದರು.

ಕೆಲವು ಶಾಸಕರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, “ಅದರಲ್ಲಿ ತಪ್ಪೇನಿದೆ? ಶಾಸಕರು, ವಿಧಾನ ಪರಿಷತ್ ಸದಸ್ಯರಾದವರಿಗೆ ಸಚಿವರಾಗುವ ಹಕ್ಕಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅಧಿಕಾರ ಸಿಎಂ ಅವರಿಗೆ ಇದೆ. ಅವರು ತಮ್ಮದೇ ಆದ ರೀತಿ ಪಕ್ಷಕ್ಕೆ ತ್ಯಾಗ ಮಾಡಿ, ದುಡಿದಿರುತ್ತಾರೆ. ಹೀಗಾಗಿ ಅವರು ಅಧಿಕಾರಕ್ಕೆ ಆಸೆ ಪಡುತ್ತಾರೆ. ಅದನ್ನು ನಾವು ತಪ್ಪು ಎಂದು ಹೇಳಲು ಸಾಧ್ಯವೇ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...