ವಕ್ಫ್ ಹೆಸರಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಮಹಾರಾಷ್ಟ್ರ, ಹರಿಯಾಣದಂತೆ ಕರ್ನಾಟಕವೂ ಧೂಳೀಪಟ: ಆರ್‌ ಅಶೋಕ್

Date:

Advertisements

ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಎಚ್ಚರಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್‌ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

“ಸಿಎಂ ಸಿದ್ದರಾಮಯ್ಯನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟಿಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ. ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ. ಮೇಲಾಗಿ ಸಚಿವ ಜಮರ್ ಅಹ್ಮದ್ ಖಾನ್ ಅವರು ಇದೆಲ್ಲ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಹೇಳುವ ವಿಡಿಯೋ ಬಹಿರಂಗ ಆದ ಮೇಲೆ ತಮ್ಮ ಸುಳ್ಳು ಸಂಪೂರ್ಣ ಬಯಲಾಯಿತು” ಎಂದರು.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

“ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನು ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲು ಸಹ ತಾವು ಅನುಮೋದನೆ ನೀಡಿದ್ದೀರಿ” ಎಂದು ತಿಳಿಸಿದರು.

“ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿ ಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಕಾಂಗ್ರೆಸ್ ಪಕ್ಷದ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ಮುಖಂಡರು ಬಡವರಿಗೆ ಸೇರಿದ ಸಾವಿರಾರು ಎಕರೆ ವಕ್ಫ್ ಭೂಮಿಯನ್ನು ಕಬಳಿಸಿದ್ದಾರೆ ಎಂಬ ವರದಿ ನಮ್ಮ ಸರ್ಕಾರಕ್ಕೆ ಬಂದಿತ್ತು. ಆಗ ಆ ವರದಿಯ ಆಧಾರದ ಮೇಲೆ ತನಿಖೆ ಮಾಡಲು ಸಂಬಂಧಪಟ್ಟವರಿಗೆ ನೋಟಿಸುಗಳನ್ನು ನೀಡಲಾಗಿತ್ತೇ ಹೊರತು ಇದರ ಹಿಂದೆ ಯಾವುದೇ ಕುತಂತ್ರ, ಷಡ್ಯಂತ್ರ ಇರಲಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ?: ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

“ಇಷ್ಟಕ್ಕೂ ಬಿಜೆಪಿ ಸರ್ಕಾರ ಬಡ ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಕೃಷಿ ಜಮೀನುಗಳಿಗೆ, ಗೋಮಾಳಗಳಿಗೆ, ಸ್ಮಶಾನಗಳಿಗೆ, ನೂರಾರು ವರ್ಷ ಇತಿಹಾಸ ಇರುವ ಸರ್ಕಾರಿ ಶಾಲೆಗಳಿಗೆ, ದೇವಸ್ಥಾನಗಳಿಗೆ, ಮಠ-ಮಾನ್ಯಗಳಿಗೆ, ಪಾರಂಪರಿಕ ತಾಣಗಳಿಗೆ, ಜನಸಾಮಾನ್ಯರ ಆಸ್ತಿ-ಪಾಸ್ತಿಗಳಿಗೆ, ಮಾಜಿ ಶಾಸಕರ ಮನೆಗಳಿಗೆ ನೋಟಿಸು ಕಳಿಸಿಲ್ಲ. ಬಡವರ ಭೂಮಿ ನುಂಗಿರುವ ದೊಡ್ಡ ದೊಡ್ಡ ತಿಮಿಂಗಿಲಗಳನ್ನು ಹಿಡಿಯುವ ಉದ್ದೇಶದಿಂದ ನೋಟಿಸು ಕೊಟ್ಟಿತ್ತು. ಇಷ್ಟಕ್ಕೂ ಈಗ ತಮ್ಮದೇ ಸರ್ಕಾರ ಇದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ ನೋಟಿಸುಗಳಲ್ಲಿ ಏನಾದರೂ ತಪ್ಪಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ” ಎಂದರು.

“ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಜನರಿಗೆ ಸ್ಪಷ್ಟವಾಗಿ ಅರ್ಥವಾಗಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಮೊದಲು ಹೇಗಾದರೂ ಮಾಡಿ ಜಮೀನು ಕಬಳಿಸಬೇಕು ಎಂಬ ಕಾಂಗ್ರೆಸ್ ಪಕ್ಷದ ಷಡ್ಯಂತ್ರ, ಕುತಂತ್ರ ಬಹುಸಂಖ್ಯಾತ ಹಿಂದೂಗಳಿಗೆ ಬಹಳ ಸ್ಪಷ್ಟವಾಗಿ ಮನವರಿಕೆಯಾಗಿದೆ. ಈಗ ಮತ್ತೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬಿಡಿ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X