ಒಂದು ವಾರ ಕಾಲ ಅಧಿವೇಶನ ವಿಸ್ತರಿಸಲು ಸಭಾಧ್ಯಕ್ಷರಿಗೆ ಆರ್‌ ಅಶೋಕ್ ಪತ್ರ

Date:

ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಳಷ್ಟು ವಿಷಯಗಳು ಬಾಕಿಯಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸಕ್ತ ಅಧಿವೇಶನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಸಭಾಧ್ಯಕ್ಷ ಯು ಟಿ ಖಾದರ್‌ ಅವರನ್ನು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕೋರಿದ್ದಾರೆ.

- Advertisement -

ಈ ಕುರಿತು ಪತ್ರ ಬರೆದಿರುವ ಅವರು, “ಡಿ.8ರಿಂದ 19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು, ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯವು ಮೊಟುಕುಗೊಂಡಿರುತ್ತದೆ. ಹೀಗಾಗಿ ಒಂದು ವಾರ ಕಾಲ ಅಧಿವೇಶನ ವಿಸ್ತರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಕೆಲವು ಹೊತ್ತು ಸಿಎಂ ಸೇರಿ ಸದಸ್ಯರು ಸಂತಾಪ ಸೂಚಿಸಿ ಮಾತನಾಡಿದರು. ಬಳಿಕ ಸಭಾಧ್ಯಕ್ಷರು ಇಂದಿನ ಅಧಿವೇಶನವನ್ನು ಮೊಟಕುಗೊಳಿಸಿ ಮಂಗಳವಾರಕ್ಕೆ ಕಲಾಪವನ್ನು ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...