ರಾಯಚೂರು | ಪದವೀಧರ ಶಿಕ್ಷಕರ ನೇಮಕಾತಿ; ಕೆಕೆ ಭಾಗದ ಅಭ್ಯರ್ಥಿಗಳ ಪರಿಗಣನೆಗೆ ಆಗ್ರಹ

Date:

ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ(ಕೆಕೆ) ಭಾಗದ ಅಭ್ಯರ್ಥಿಗಳನ್ನು ಹೊರಗಿಟ್ಟು ನೇಮಕಾತಿ ಕೌ‌ನ್ಸೆಲಿಂಗ್ ನಡೆಸುತ್ತಿರುವದನ್ನು ತಡೆದು ಈ ಭಾಗದ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿ ಪದವೀಧರ ಶಿಕ್ಷಕ ಅಭ್ಯರ್ಥಿಗಳು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟಿಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

- Advertisement -

“ಪದವೀಧರ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್‌ ಅನುಮತಿ ನೀಡಿದೆ. ಆದರೆ ಕೆಎಟಿ(ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ)ಯಲ್ಲಿ ಪ್ರಕರಣವೊಂದು ಬಾಕಿಯಿರುವ ನೆಪದಲ್ಲಿ ಕಲ್ಯಾಣ ಕರ್ನಾಟಕ ಹೊರತುಪಡಿಸಿ ಶಾಲಾ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ಪ್ರಕ್ರಿಯೆ ಪ್ರಾರಂಭಿಸಿದೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಭಾಗದಲ್ಲಿ 5 ಸಾವಿರಕ್ಕೂ ಅಧಿಕ ಶಿಕ್ಷಕ ಹುದ್ದೆಗಳು ಖಾಲಿಯಿವೆ. ಈ ಭಾಗದ ಅಭ್ಯರ್ಥಿಗಳನ್ನು ನೇಮಕ ಮಾಡುವುದರಿಂದ ಶೈಕ್ಷಣಿಕ ಅಭಿವೃದ್ದಿಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ

“ಕೆಎಟಿಯಲ್ಲಿರುವ ಪ್ರಕರಣದ ಹೆಸರಿನಲ್ಲಿ ಈ ಭಾಗವನ್ನು ಬಿಟ್ಟು ಕೌನ್ಸೆಲಿಂಗ್ ನಡೆಸುವುದು ಅಭ್ಯರ್ಥಿಗಳಲ್ಲಿ ಅತಂತ್ರತೆಗೆ ಕಾರಣವಾಗಿದೆ. ಕೆಎಟಿಯಲ್ಲಿ ಬಾಕಿಯಿರುವ ಪ್ರಕರಣವನ್ನು ಇತ್ಯರ್ಥಪಡಿಸಿ ನೇಮಕಾತಿಗೆ ಪರಿಗಣಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ ಕೊರತೆ

ಸಚಿವರು ಮನವಿ ಸ್ವೀಕರಿಸಿದ್ದು, ಕೂಡಲೇ ಸರ್ಕಾರದ ಗಮನ ಸೆಳೆದು ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಸದಸ್ಯ ಜಯಣ್ಣ ಸೇರಿದಂತೆ ನೂರಾರು ಸಂಖ್ಯೆಯ ಶಿಕ್ಷಕ ಹುದ್ದೆಯ ಅಭ್ಯರ್ಥಿಗಳು ಭಾಗಿಯಾಗಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...