ರೈಲ್ವೆ ಪರೀಕ್ಷೆ | ಜನಿವಾರ-ಮಂಗಳಸೂತ್ರ ತೆಗೆಯಬೇಡಿ: ಅಧಿಕಾರಿಗಳಿಗೆ ರೈಲ್ವೆ ರಾಜ್ಯ ಖಾತೆ ಸಚಿವ ಸೋಮಣ್ಣ ಸೂಚನೆ

Date:

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಈ ವಿಚಾರವನ್ನು ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಸೋಮಣ್ಣ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದಾದ ಬೆನ್ನೆಲ್ಲೆ ಅಂತಹದ್ದೇ ಆದೇಶ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಗೂ ನೀಡಿರುವುದು ಆಕ್ಷೇಪಕ್ಕೆ ಕಾರಣವಾಗಿತ್ತು. ಪ್ರವೇಶ ಪತ್ರದಲ್ಲಿ ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ನಮೂದಿಸಲಾಗಿದೆ.

ರೈಲ್ವೆ ಇಲಾಖೆಯ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹುದ್ದೆಗೆ ಏ.29ರಂದು ಪರೀಕ್ಷೆ ನಡೆಯಲಿದ್ದು, ಮಂಗಳೂರಿನ ಬೋಂದೆಲ್‌ನ ಕಾಲೇಜೊಂದರಲ್ಲಿ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ ಆಕ್ಷೇಪಿಸಿದ್ದು, ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆ ತಂದಿದೆ. ದೇಶಾದ್ಯಂತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣು ಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತರುತ್ತದೆ” ಎಂದಿದೆ.

ಬಿಜೆಪಿಗೆ ಮುಜುಗರ

ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ರಾಜ್ಯ ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಿಜೆಪಿ ಬಳಸಿಕೊಂಡಿತ್ತು. ಇದೀಗ ರೈಲ್ವೆ ಪರೀಕ್ಷೆ ವಿವಾದ ಮುಜುಗರ ತರಿಸಿದೆ. ಸಿಇಟಿ ಪರೀಕ್ಷಾ ಪ್ರಕರಣದ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನೋಟಿಸ್‌ ನೀಡಿದ್ದನ್ನು ಬಿಜೆಪಿ ಸಮರ್ಥಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...