ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

Date:

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಒಟ್ಟು 15 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಹವಾಮಾನ ಇಲಾಖೆಯ ವರದಿಯ ಪ್ರಕಾರ,‌ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವವಿದೆ.

ಉಳಿದಂತೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ 4.1 ಮಿ.ಮೀ ಮಳೆಯಾಗಿದೆ. ಎಚ್‌ಎಎಲ್ (HAL) ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ 15.8 ಮಿ.ಮೀ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) 1.6 ಮಿ.ಮೀ ಮಳೆ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 19°C ರಿಂದ 20°C ಹಾಗೂ ಗರಿಷ್ಠ ತಾಪಮಾನ 27°C ರಿಂದ 28°C ಆಸುಪಾಸಿನಲ್ಲಿರಲಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

ಬೀದರ್‌ | ಕನ್ನಡ ಭಾಷೆಯ ಬೆಳವಣಿಗೆ ಎಲ್ಲರ ಹೊಣೆ : ಸಿದ್ರಾಮಪ್ಪ ಮಾಸಿಮಾಡೆ

ಕನ್ನಡ ಭಾಷೆ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದ್ದು, ಅದರ ಉಳಿವು, ಬಳಕೆ...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...