ಮಾರ್ಚ್ 25ರಿಂದ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಇಂದು ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿದಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು & ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಿಡಿಲು & ಜೋರಾದ ಗಾಳಿಯೊಂದಿಗೆ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾರ್ಚ್ 25ರಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದೆ.
This video cannot be played in your browser. Open the video directly
ಬುಧವಾರದಿಂದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವೆ ಇರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





