ಇಂದಿನಿಂದ ಎರಡು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಳಾಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಮುಂದುವರೆದಿದ್ದು, ಈಗ ಸಮುದ್ರ ಮಟ್ಟದಿಂದ 1.5 ಕಿ.ಮೀ.ವರೆಗೆ ವಿಸ್ತರಿಸಿದೆ ಎಂದು ಇಲಾಖೆ ವರದಿ ತಿಳಿಸಿದೆ.
ಇದನ್ನು ಓದಿದ್ದೀರಾ? ರಾಜ್ಯದ 11 ಜಿಲ್ಲೆಗಳಲ್ಲಿ ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಇಂದು (ಜನವರಿ 13) ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳ ಮೇಲೆ ಒಣ ಹವೆ ಹೆಚ್ಚಾಗಿರಲಿದೆ. ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ. ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಜನವರಿ 13, 14ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ದಿನದ #ಮಳೆ #ಭವಿಷ್ಯ ಮತ್ತು ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/4hMahwjfAW
— Karnataka State Natural Disaster Monitoring Centre (@KarnatakaSNDMC) January 13, 2025
ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಜನವರಿ 15ರಂದು ಒಣ ಹವಾಮಾನವು ರಾಜ್ಯದಲ್ಲಿರುವ ಸಾಧ್ಯತೆಯಿದೆ. ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಆಳದಿಂದ ಸಾಧಾರಣ ಮಂಜು ಆವರಿಸಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
