ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
“ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಇದನ್ನು ಓದಿದ್ದೀರಾ? ನವೆಂಬರ್ 5 ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ. ನಾಳೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಉಲ್ಲೇಖಿಸಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
