ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕನಿಷ್ಠ 12 ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದ್ದು, ಡಿಸೆಂಬರ್ 9ರವರೆಗೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.
ಈಶಾನ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಹತ್ತು ದಿನಗಳ ಕಾಲ (ಡಿಸೆಂಬರ್ 9) ಮಳೆಯ ಆರ್ಭಟ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವೆಡೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.
ಅಲ್ಲದೆ, ತಾಪಮಾನದಲ್ಲಿ ಗಣನೀಯ ಇಳಿಕೆಯಾಗಲಿದ್ದು, ಬೆಳಗಿನ ಜಾವ ದಟ್ಟ ಮಂಜು ಮತ್ತು ಚಳಿಯ ವಾತಾವರಣ ಇರಲಿದೆ.



