ಇಳಿ ಹೊತ್ತಿಗೆ ತಂಪಾದ ಇಳೆ; ಗುಡುಗು-ಮಿಂಚುಗಳಿಂದ ಕೂಡಿದ ಮಳೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಭಾರತದ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ದೇಶದ ನಾನಾ ಭಾಗಗಳಲ್ಲಿ ಮಳೆಯಾಗಲಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಾರ್ಚ್‌ 24ರವರೆಗೆ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತದೆ ಎಂದು ಹೇಳಿದೆ.

ಬೆಂಗಳೂರಿನ ಚಿಕ್ಕಪೇಟೆ, ಕೆ.ಆರ್‌ ಮಾರ್ಕೆಟ್, ಬಸವನಗುಡಿ, ಕೋರಮಂಡಲ ಸೇರಿದಂತೆ ನಾನಾ ಭಾಗಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...