ಜನವರಿ 13, 14ರಂದು ಬೆಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಇಂದು ಮತ್ತು ನಾಳೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಹಾಗೆಯೇ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅಧಿಕ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ ಉತ್ತರ ಒಳನಾಡಿನಲ್ಲಿ ಐದು ದಿನ ಭಾರಿ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳದ ಆಗ್ನೇಯ ಮತ್ತು ಪಕ್ಕದ ನೈಋತ್ಯ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲೆಯ ಮೇಲೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ.
ಇನ್ನು ಜನವರಿ 13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು
ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.
ಇದನ್ನು ಓದಿದ್ದೀರಾ? ಮುಂದಿನ ಐದು ದಿನ ತಾಪಮಾನ ಇಳಿಕೆ, ಚಳಿ ಹೆಚ್ಚಳ : ಹವಾಮಾನ ಇಲಾಖೆ
ಇನ್ನು ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಜನವರಿ 13 ಮತ್ತು 14ರಂದು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತು ದಕ್ಷಿಣ ಒಳನಾಡು ರಾಜ್ಯದ ಉಳಿದ ಜಿಲ್ಲೆಗಳಲ್ಲಿಒಣ ಹವಾಮಾನ ಇರುವ ಸಾಧ್ಯತೆ ಇದೆ. ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಂಜು ಇರುವ ಸಾಧ್ಯತೆಯಿದೆ ಎಂದು ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
