ನ. 24ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜ್ಯದಾದ್ಯಂತ ಇಂದಿನಿಂದ ನವೆಂಬರ್ 24ರವರೆಗೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆ ಚಳಿ ಮತ್ತು ಅಲ್ಲಲ್ಲಿ ಮಂಜಿನ ವಾತಾವರಣ ಇರಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುವ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದು ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 23ರಂದು ಕೊಪ್ಪಳ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇನ್ನು ದಕ್ಷಿನ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 24ರವರೆಗೆ ಮಳೆಯಾಗಲಿದೆ. 25ರಿಂದ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಇಂದು ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಬೆಂಗಳೂರಿನಲ್ಲಿ ಕೆಲವೆಡೆ ಮುಂಜಾನೆ ಮಂಜು ಇರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...