ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಅದೂ ಪ್ರಮುಖವಾಗಿ ಕರಾವಳಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳವರೆಗೂ ಇದೇ ರೀತಿಯ ಹವಾಮಾನ ಮುಂದುವರೆಯಲಿದೆ.
ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಇಂದು ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ & #ಎಚ್ಚರಿಕೆಗಳು:(ಮೂಲ:IMD)
— Karnataka State Natural Disaster Monitoring Centre (@KarnatakaSNDMC) April 20, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು, ಮಿಂಚು & ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. pic.twitter.com/Z6jLqVBboc
ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
