ರಾಜ್ಯದಲ್ಲಿ ಮಳೆ ಆರ್ಭಟ; 25 ಮಂದಿ ಸಾವು

Date:

ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಹಿಂಗಾರು ಮಳೆಯಿಂದಾಗಿ ರಾಜ್ಯದಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಪ್ರಮಾಣದಲ್ಲಿ ಆಸ್ತಿ-ಆಸ್ತಿ, ಬೆಳೆ ನಾಶವಾಗಿದೆ ಎಂದು ಸರ್ಕಾರ ತಿಳಿಸಿದೆ.

- Advertisement -

ಹಿಂಗಾರು ಮಳೆಯಿಂದಾದ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಹಿಂಗಾರು ಮಳೆ ವಾಡಿಕೆಗಿಂತ 58% ಹೆಚ್ಚು ಸುರಿದಿದೆ. ಒಟ್ಟು 25 ಸಾವುಗಳು ಸಂಭವಿಸಿವೆ. ಮೃತರ ಕುಟುಂಬಗಳಿಗೆ ತುರ್ತು ಪರಿಹಾರ ನೀಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಮಳೆಯ ಅಬ್ಬರಕ್ಕೆ 84 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,077 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಲಾಗಿದೆ. ಒಟ್ಟು 74,993 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ, 30,941 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ನಾಶವಾಗಿರುವುದಾಗಿ ಅಂದಾಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 551.25 ಕೋಟಿ ರೂ. ಹಾಗೂ ತಹಶೀಲ್ದಾರ್‌ ಅವರ ಖಾತೆಯಲ್ಲಿ 115.71 ಕೋಟಿ ರೂ. ಹಣವಿದೆ. ಮುಂಗಾರು ಮಳೆಯ ಸಮಯದಲ್ಲಿಯೂ 80 ಸಾವಿರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಬೆಳೆ ಪರಿಹಾರ ನೀಡಲಾಗುತ್ತಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...