ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಸೋಮವಾರ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿದೆ.
ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಬೆಂಗಳೂರಿನಲ್ಲಿ ಮಳೆ ಬಂದಿರಲಿಲ್ಲ. ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ. ಚಾಮರಾಜನಗರ, ಕೋಲಾರದಲ್ಲಿ ಮಳೆಯಾಗಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಹಾಗೆಯೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
This video cannot be played in your browser. Open the video directly





