ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 16ರವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ವರದಿ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ತಿಳಿಸಿದೆ.
ಇದನ್ನು ಓದಿದ್ದೀರಾ? ದೇಶದಲ್ಲಿ ಈ ಬಾರಿ ವಿಪರೀತ ಚಳಿ: ಹವಾಮಾನ ಇಲಾಖೆ ಮುನ್ಸೂಚನೆ
ಮುಖ್ಯವಾಗಿ ಒಣ ಹವೆಯ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಇನ್ನು ನಿನ್ನೆ (ಸೆಪ್ಟೆಂಬರ್ 14) ಉತ್ತರ ಕನ್ನಡದ ಕುಮಟಾ, ಶಿರಾಲ್ಲ ಪಿಟಿಒ ಬಳಿ, ಕಾರಾವಾರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ ವೀಕ್ಷಣಾಲಯದ ಸಮೀಪ, ಮಂಗಳೂರು ನಗರ, ಪಣಂಬೂರು, ಬೆಳಗಾವಿ ಲೋಂಡಾ, ಕೊಡಗಿನ ಪೊನ್ನಂಪೇಟೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಎಚ್‌ಎಂಎಸ್‌ನಲ್ಲಿ ಮಳೆಯಾಗಿದೆ.
