ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದಲ್ಲಿ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡ, ಕಲಬುರಗಿ, ಧಾರವಾಡ, ಬೀದರ್, ಗದಗ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.
ಇದನ್ನು ಓದಿದ್ದೀರಾ? ಚಳಿಗಾಲದಲ್ಲೂ ಹೆಚ್ಚಲಿದೆ ಬಿಸಿಲು; ತಗ್ಗಲಿದೆ ಶೀತ ಗಾಳಿ: ಹವಾಮಾನ ಇಲಾಖೆ
ಇಂದು (ಡಿಸೆಂಬರ್ 8) ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರದಲ್ಲಿ ಹಗಲಿನಲ್ಲಿ ಸಾಮಾನ್ಯ ಹವಾಮಾನವಿದ್ದರೆ, ಸಂಜೆ ಅಥವಾ ರಾತ್ರಿ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿ ಉಲ್ಲೇಖಿಸಿದೆ.
