ಕರ್ನಾಟಕದಲ್ಲಿ ಕೈಕೊಟ್ಟ ಚಳಿ, ತಾಪಮಾನ ಹೆಚ್ಚಳ: ಡಿ.24 ರಿಂದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ

Date:

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನವೂ ಹೆಚ್ಚಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು ಎನ್ನುವ ಅನುಮಾನ ಮೂಡಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಡಿ.24ರಿಂದ ಕೆಲ ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...