ಏ. 13ರಿಂದ 15ರವರೆಗೆ ಗುಡುಗು ಸಹಿತ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಏಪ್ರಿಲ್ 15ರವರೆಗೆ ಗುಡುಗು ಸಿಡಿಲು, ಜೋರಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

- Advertisement -

ಇಂದು ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ & ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು & ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನು ಓದಿದ್ದೀರಾ? ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ.

imd 1

ಏಪ್ರಿಲ್ 13ರಿಂದ 15ರವರೆಗೆ ದಕ್ಷಿಣ ಒಳನಾಡು, ಮಲೆನಾಡು & ಕರಾವಳಿ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ.

ಏಪ್ರಿಲ್ 15ರವರೆಗೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀನಂತೆ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ಗಾಳಿಯಂತೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇತರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಹುಮನಾಬಾದ್‌ | ಒಗ್ಗಟ್ಟಿನಿಂದ ಹೂಗಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಸಿದ್ದಲಿಂಗಪ್ಪ ಪಾಟೀಲ

ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ...

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...