ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ

Date:

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ ರಾಜ್ಯದ ಹವಾಮಾನದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ‌ 11 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ‌ ತಿಳಿಸಿದೆ.

- Advertisement -

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಈ ಪೈಕಿ,ಮುನ್ನೆಚ್ಚರಿಕಾ ಕ್ರಮವಾಗಿ 6 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿಯಿಂದ ಆರಂಭವಾದ ತುಂತುರು ಮಳೆ ಭಾನುವಾರ ಬೆಳಿಗ್ಗೆಯೂ ನಿರಂತರವಾಗಿ ಮುಂದುವರಿದಿದೆ. ನಗರದ ಮಲ್ಲೇಶ್ವರಂ, ಶಾಂತಿನಗರ, ಮೆಜೆಸ್ಟಿಕ್, ಕಾರ್ಪೊರೇಷನ್, ಕೆ.ಆರ್. ಮಾರ್ಕೆಟ್, ವಿಜಯನಗರ ಹಾಗೂ ಹೆಬ್ಬಾಳ ಸೇರಿದಂತೆ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಪೂರ್ತಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿಯೊಂದಿಗೆ ಜಿಟಿಜಿಟಿ ಮಳೆ ಸುರಿಯುತ್ತಿದೆ.

ನಿರಂತರ‌ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಮತ್ತು ಮುಖ್ಯ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ರಸ್ತೆಗಳು ಜಾರುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಜಾಗರೂಕರಾಗಿ ಚಲಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಇನ್ನು, ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.

ಬಂಗಾಳಕೊಲ್ಲಿಯ ಈ ಹವಾಮಾನ ವೈಪರೀತ್ಯದ ಪರಿಣಾಮವು ಕರ್ನಾಟಕ ಮಾತ್ರವಲ್ಲದೆ ನೆರೆರಾಜ್ಯಗಳ ಮೇಲೆಯೂ ತೀವ್ರ ಪರಿಣಾಮ ಬೀರಿದೆ. ಕೇರಳ, ತಮಿಳುನಾಡು, ಪುದುಚೇರಿ, ಕರಾವಳಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲೂ ಮುಂದಿನ ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು...

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000...

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...