ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಚಳಿ ಮತ್ತು ಒಣಹವೆ ಮುಂದುವರಿದಿದೆ. ಆದಾಗ್ಯೂ, ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಮುಂದಿನ ಮೂರು ದಿನಗಳ ಕಾಲ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ನವೆಂಬರ್ 24ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.


