ರಾಜ್ಯಾದ್ಯಂತ ಮಳೆ: ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಜತೆಗೆ ಗುಡ್ಡಗಾಡು ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಈ ಅವಧಿಯಲ್ಲಿ ಜಾಗರೂಕರಾಗಿರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಸಲಾಗಿದೆ.

- Advertisement -

ಕರಾವಳಿಯ ಹೊರತಾಗಿ, ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಕರಾವಳಿ ಜಿಲ್ಲೆಗಳ ಜತೆಗೆ, ಮಲೆನಾಡು ಪ್ರದೇಶದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 8ರ ಮಳೆ ಮುನ್ಸೂಚನೆ

ಜುಲೈ 8ರಂದು ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ, ಅಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 9 ಮತ್ತು 10ರ ನಂತರ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರಿನ ಹವಾಮಾನ

ಬೆಂಗಳೂರಿನಲ್ಲಿ ಹವಾಮಾನ ಮುನ್ಸೂಚನೆಯ ಪ್ರಕಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು, ತಾಪಮಾನವು 21°C ಮತ್ತು 30°C ನಡುವೆ ಉಳಿಯುವ ಸಾಧ್ಯತೆಯಿದೆ.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿರುವುದರಿಂದ, ವಿಶೇಷವಾಗಿ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳ ನಿವಾಸಿಗಳು ಹವಾಮಾನ ಎಚ್ಚರಿಕೆಗಳ ಬಗ್ಗೆ ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

ಪಶ್ಚಿಮ ಘಟ್ಟಗಳಿಗೆ ಭೂಕುಸಿತದ ಎಚ್ಚರಿಕೆ

ಜುಲೈ 7ರಿಂದ ಜುಲೈ 11ರವರೆಗೆ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಇಳಿಜಾರು ಕುಸಿತದ ಅಪಾಯ ಹೆಚ್ಚಾಗಬಹು. ಹಾಗಾಗಿ ಪಶ್ಚಿಮ ಘಟ್ಟಗಳಿಗೆ ಭೂಕುಸಿತದ ಎಚ್ಚರಿಕೆ ನೀಡಲಾಗಿದ್ದು, ಗುಡ್ಡಗಾಡು ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಈ ಅವಧಿಯಲ್ಲಿ ಜಾಗರೂಕರಾಗಿರಲು ಸೂಚಿಸಲಾಗಿದೆ.

ನಿರಂತರ ಮಳೆಯಿಂದ ಮಣ್ಣು ಸಡಿಲಗೊಳ್ಳುತ್ತದೆ. ಇದರಿಂದ ಬೆಟ್ಟದ ಇಳಿಜಾರು ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲುಗಳು ಜಾರುವ ಅಪಾಯ ಉಂಟಾಗುತ್ತದೆ. ಹಾಗಾಗಿ ಪಶ್ಚಿಮ ಘಟ್ಟ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ನಿವಾಸಿಗಳು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ನಿರಂತರ ಮಳೆಯಿಂದ ನದಿಗಳು, ಹೊಳೆಗಳು ಮತ್ತು ಜಲಾಶಯಗಳ ನೀರಿನ ಮಟ್ಟವೂ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿದ್ದೀರಾ? ರಾಜ್ಯದಲ್ಲಿ ಶೇ.42ರಷ್ಟು ಮಳೆ: ಜಲಾಶಯಳಿಗೆ ಜೀವಕಳೆ

ನಿವಾಸಿಗಳು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ನಿರಂತರ ಮಳೆಯಿಂದ ನದಿಗಳು, ಹೊಳೆಗಳು ಮತ್ತು ಜಲಾಶಯಗಳ ನೀರಿನ ಮಟ್ಟವೂ ಏರಿಕೆಯಾಗುವ ಸಾಧ್ಯತೆ ಇದೆ. ಹಾಗಾಗಿ ಗುಡ್ಡ ಪ್ರದೇಶಗಳಿಗೆ ಅನಾವಶ್ಯಕ ಪ್ರಯಾಣ ಮಾಡುವುದನ್ನು ತಪ್ಪಿಸಬೇಕು. ಹಳ್ಳ-ಕೊಳ್ಳಗಳ ಬಳಿ ಜಾಗರೂಕರಾಗಿರಬೇಕು ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ವೋಟ್ ಇಲ್ಲದಿದ್ದರೆ ಲೈಟೂ ಇಲ್ಲ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತ ಬೆನ್ನಲ್ಲೇ ಗ್ರಾಮದ ಬೀದಿ ದೀಪಗಳು ಆಫ್!

ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡ ಬೆನ್ನಲ್ಲೇ, ಚುನಾವಣೆಗೂ ಮುನ್ನ...

ಬರ ಹಿನ್ನೆಲೆ; ವಿಬಿ-ಜಿ ರಾಮ್‌ಜಿ ಯೋಜನೆಯಡಿ 175 ದಿನಗಳ ಕೆಲಸಕ್ಕೆ ಪತ್ರ: ಈಶ್ವರ ಖಂಡ್ರೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರಗಾಲ ಆವರಿಸಿದ್ದು, "ವಿಕಸಿತ ಭಾರತ - ಗ್ಯಾರಂಟಿ...