13 ಜಿಲ್ಲೆಗಳಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ, ಹಲವೆಡೆ ಬೆಳೆಹಾನಿ

Date:

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಎಲ್ಲೆಡೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಸಿಡಿಲು, ಬಿರುಗಾಳಿ ಮಳೆ ಜೋರಾಗಿದ್ದರಿಂದ ಮೂವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

- Advertisement -

ಗದಗಿನ ಹೊರವಲಯದ ಒತ್ತಲಗೇರಿ ಓಣಿ ನಿವಾಸಿ, ಕುರಿಗಾಹಿ, ಮರೆತಮ್ಮಪ್ಪ(52) ಎಂಬುವರು ಮನೆಯ ಹೊರಗೆ ಮಲಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಾಳಿ-ಮಳೆಗೆ ಹೆಸ್ಕಾಂನ ವಿದ್ಯುತ್ ಕಂಬವೊಂದು ಮುರಿದು ಬಿದ್ದು, ಕುರಿಗಾಹಿ ಮಂಜಪ್ಪ(26) ಎಂಬುವರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕಂಬಳೂರು ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ(45) ಎಂಬುವರು ಮನೆ ಮುಂದೆ ನಿಂತು ಮಳೆ ವೀಕ್ಷಿಸುತ್ತಿದ್ದಾಗ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಗದಗ ಸೇರಿದಂತೆ ಕಿತ್ತೂರು ಕರ್ನಾಟಕದ ವಿವಿಧೆಡೆಯೂ ಬಿರುಸಿನ ಮಳೆ ಸುರಿದಿದೆ. ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದ್ದರಿಂದ 70ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, 20ಕ್ಕೂ ಅಧಿಕ ಕಾರು, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಧಾರವಾಡ ಜಿಲ್ಲೆ ಅಂಬೋಳಿ ಗ್ರಾಮದಲ್ಲಿ ಮನೆಯ ಛಾವಣಿಯ ಶೀಟುಗಳು ಹಾರಿಹೋಗಿವೆ. ಅಣ್ಣಿಗೇರಿ, ನವಲಗುಂದ, ಕಲಘಟಗಿ, ಉಪ್ಪಿನಬೆಟಗೇರಿ, ಗುಡಗೇರಿಯಲ್ಲಿ ಸಾಧಾರಣ ಮಳೆಯಾಗಿದೆ.

ಬೆಳಗಾವಿ ಜಿಲ್ಲೆಯ ಹಲವೆಡೆ ಮಧ್ಯಾಹ್ನದ ನಂತರ ಸುಮಾರು 2 ಗಂಟೆ ಭಾರೀ ಮಳೆಯಾಗಿದ್ದು, ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ಮುನವಳ್ಳಿ–ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಸವದತ್ತಿ ತಾಲೂಕಿನ ಹೊಸೂರ ಬಳಿಯ ಯಕ್ಕುಂಡಿ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿರುಸಿನ ಮಳೆಯಾಗಿದ್ದು, ಭಟ್ಕಳ ಸೇರಿದಂತೆ ಕರಾವಳಿ ಪ್ರದೇಶ, ಮುಂಡಗೋಡ ಸೇರಿ ಅರೆಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ಆಳ ಸಮುದ್ರಕ್ಕೆ ತೆರಳಬೇಕಿದ್ದ ಹತ್ತಾರು ದೋಣಿಗಳು ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿವೆ. ಮಲ್ಪೆ, ಗೋವಾ ಸೇರಿದಂತೆ ವಿವಿಧೆಡೆಯ ದೋಣಿಗಳು ಇಲ್ಲಿಯೇ ಆಶ್ರಯ ಪಡೆದಿವೆ.

ಗದಗ ನಗರ ಸೇರಿದಂತೆ ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಸುರಿಯಿತು. ಬಾಗಲಕೋಟೆ-ನವನಗರ ಅವಳಿ ಜಿಲ್ಲೆಯ ತೇರದಾಳದಲ್ಲಿ ಜೋರು ಗಾಳಿ, ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿವೆ.

ಚಾಮರಾಜನಗರ ಜಿಲ್ಲೆಯ ಹನೂರು, ಗುಂಡ್ಲುಪೇಟೆ, ಯಳಂದೂರು, ಚಾಮರಾಜನಗರ ತಾಲೂಕುಗಳಲ್ಲಿಯೂ ಬಿರುಸಿನ ಮಳೆ ಸುರಿದಿದ್ದು, ಗುಂಡ್ಲುಪೇಟೆ ತಾಲೂಕಿನ ಬೀಮನಮಡುವಿನಲ್ಲಿ ರೈತ ಮಹದೇವ ಅವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಬೆಳೆ ಕೊಚ್ಚಿಹೋಗಿದೆ. ಹಲವೆಡೆ ಬಾಳೆ ಗಿಡಗಳು, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಹನೂರು ತಾಲೂಕಿನ ಕೆರೆ– ಕಟ್ಟೆಗಳಲ್ಲಿ ಕೊಂಚ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಇದರಿಂದಾಗಿ ಜನ-ಜಾನುವಾರುಗಳ ದಾಹ ತಣಿಯುವಂತಾಗಿದೆ. ಅಲ್ಲದೆ ಕೃಷಿ ಕಾರ್ಯಗಳು ಗರಿಗೆದರಿದ್ದು, ರೈತರ ಮೊಗದಲ್ಲಿ ಮಂದಹಾಸ ಬೀರಿದೆ. ಅಲ್ಲದೆ ಶಿವಮೊಗ್ಗ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಿದೆ.

ಇದನ್ನೂ ಓದಿದ್ದೀರಾ? ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮಳೆ ಆರಂಭವಾಗಿದ್ದು, ಸುಮಾರು 2 ಗಂಟೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡು ಟ್ರ್ಯಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ತಗ್ಗು ಪ್ರದೇಶಗಳು, ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೆಲ ಅಂಡರ್‌ಪಾಸ್‌ಗಳಲ್ಲಿ ಸುಮಾರು ಒಂದು ಅಡಿ ಎತ್ತರದವರೆಗೂ ನೀರು ಸಂಗ್ರಹವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...