ರಾಜೀವ್ ಗಾಂಧಿ ದೂರದೃಷ್ಟಿಯ ಮಹಾನ್ ನಾಯಕ: ಶ್ರೀಪೆರಂಬದೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಬಣ್ಣನೆ

Date:

“ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಅನೇಕ ನಾಯಕರನ್ನು ಸೃಷ್ಟಿ ಮಾಡಿದ, ಅಪಾರ ದೂರದೃಷ್ಟಿ ಹೊಂದಿದ್ದ ಮಹಾನ್ ನಾಯಕರು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ.

- Advertisement -

​ಇಂದು (ಆ. 20) ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹಿನ್ನೆಲೆಯಲ್ಲಿ ಈ ಅವಕಾಶವನ್ನು ಬಳಸಿಕೊಂಡು ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

​”ಇಂದು ರಾಜೀವ್ ಗಾಂಧಿ ಅವರ ಜನ್ಮದಿನ. ಕಳೆದ 15 ವರ್ಷಗಳಿಂದ ನಾನು ಸತತವಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದು, ಈ ಸ್ಮಾರಕದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗ ನಿರ್ಮಾಣವಾದ ಈ ಸ್ಮಾರಕಕ್ಕೆ, ಕನಕಪುರದ ನಮ್ಮ ಕ್ವಾರಿಯಿಂದಲೇ ಏಕಶಿಲಾ ಗ್ರಾನೈಟ್ ತರಿಸಲಾಗಿತ್ತು ಎಂಬುದು ನನ್ನ ಪಾಲಿಗೆ ದೊರೆತ ಮಹತ್ತರ ಸೇವಾ ಅವಕಾಶವಾಗಿದೆ” ಎಂದು ಅವರು ಸ್ಮರಿಸಿದರು.

​ಯುವಜನತೆಯ ಮೇಲೆ ಅಪಾರ ನಂಬಿಕೆ

“ರಾಜೀವ್ ಗಾಂಧಿ ಅವರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಪಂಚಾಯಿತಿಯಿಂದ ಸಂಸತ್ತಿನವರೆಗೆ ಯುವಜನತೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇಂದು ಅವರು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಸಿದ್ಧಾಂತ ಮತ್ತು ನಾಯಕತ್ವ ಸದಾ ಜೀವಂತವಾಗಿದೆ. ಅವರ ವಿಚಾರಧಾರೆಗಳಿಂದಲೇ ನಾವು ರೂಪುಗೊಂಡಿದ್ದು, ಅವರ ಪರಂಪರೆಯನ್ನು ಮುಂದುವರಿಸುವುದು ನಮ್ಮ ಕರ್ತವ್ಯ” ಎಂದು ಮುಖ್ಯಮಂತ್ರಿಗಳು ಹೇಳಿದರು.

​ಗಾಂಧಿ ಕುಟುಂಬದ ತ್ಯಾಗ ಅನನ್ಯ

“ಅಧಿಕಾರ ಇರಲಿ, ಇಲ್ಲದಿರಲಿ ಗಾಂಧಿ ಕುಟುಂಬ ಸದಾ ದೇಶವನ್ನು ಮುನ್ನಡೆಸಿದೆ. ಜವಾಹರಲಾಲ್ ನೆಹರೂ ಅವರಿಂದ ಹಿಡಿದು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರವರೆಗೂ ದೇಶಕ್ಕಾಗಿ ಮಾಡಿದ ತ್ಯಾಗ ಮತ್ತು ಕೊಡುಗೆಗೆ ಸರಿಸಾಟಿ ಇಲ್ಲ. ಕಾಂಗ್ರೆಸ್ ಶಕ್ತಿಯೇ ದೇಶದ ಶಕ್ತಿಯಾಗಿದೆ. ಪ್ರತಿ ವರ್ಷವೂ ಕರ್ನಾಟಕದಿಂದ ರಾಜೀವ್ ಜ್ಯೋತಿಯನ್ನು ಇಲ್ಲಿಗೆ ತಂದು, ಬಳಿಕ ದೆಹಲಿಗೆ ಕೊಂಡೊಯ್ಯಲಾಗುತ್ತದೆ” ಎಂದರು.

​ಕ್ಷೇತ್ರ ಮರುವಿಂಗಡಣೆ 1971ರ ಗಣತಿಯಂತೆಯೇ ಆಗಲಿ

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ನಾಯಕರು ಮುಂಚಿತವಾಗಿ ದೊಡ್ಡ ಮಟ್ಟದ ರಾಜಕೀಯ ಚರ್ಚೆ ಅಥವಾ ಹೇಳಿಕೆಗಳಲ್ಲಿ ತೊಡಗುವ ಬದಲು, ರಾಷ್ಟ್ರ ನಿರ್ಮಾಣದ ಮೂಲಭೂತ ಕೆಲಸಗಳತ್ತ ಗಮನಹರಿಸಬೇಕು” ಎಂದು ತಿಳಿಸಿದರು.

​”ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ನಾವು ಪ್ರಮುಖವಾಗಿ ‘ಕ್ಷೇತ್ರ ಮರುವಿಂಗಡಣೆ’ (ಡಿಲಿಮಿಟೇಶನ್) ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಮುಂಬರುವ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಇತ್ತೀಚಿನ ಜನಸಂಖ್ಯಾ ಅಂಕಿ-ಅಂಶಗಳ ಬದಲಿಗೆ 1971ರ ಜನಗಣತಿಯ ಆಧಾರದ ಮೇಲೆಯೇ ನಡೆಸಬೇಕು ಎಂಬುದು ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಒಗ್ಗಟ್ಟಿನ ಬೇಡಿಕೆಯಾಗಿದೆ” ಎಂದು ಅವರು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...