ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಳವಡಿಕೆಗೆ ಮುಂದಾದ ರಾಜೀವ್ ಗಾಂಧಿ ಆರೋಗ್ಯ ವಿವಿ

Date:

Advertisements

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ವೈದ್ಯಕೀಯ ಸಂಸ್ಥೆಗಳ ಹಾಸ್ಟೆಲ್‌ಗಳ ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ತಡೆ ಸಾಧನ ಅಥವಾ ಆ್ಯಂಟಿ ಸೂಯಿಸೈಡ್ ಡಿವೈಸ್ ಸಾಧನಗಳನ್ನು ಅಳವಡಿಸಲು ಯೋಚಿಸಿದೆ.

ಕರ್ನಾಟಕದ ಕಾಲೇಜು ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜೀವ್ ಗಾಂಧಿ ಆರೋಗ್ಯ ವಿವಿ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ.

ಎರಡು ವಾರಗಳ ಅವಧಿಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಮಿಮ್ಸ್) ಇಬ್ಬರು ವಿದ್ಯಾರ್ಥಿಗಳು ಹಾಸ್ಟೆಲ್ ಕೊಠಡಿಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳವಣಿಗೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Advertisements

300ಕ್ಕೂ ಹೆಚ್ಚು ಆತ್ಮಹತ್ಯೆಗಳಿಗೆ ತಡೆ

ಪ್ರಸ್ತಾವಿತ ಆ್ಯಂಟಿ ಸೂಯಿಸೈಡ್ ಡಿವೈಸ್ ಸೀಲಿಂಗ್ ಫ್ಯಾನ್‌ ಮೇಲಿನ ತೂಕ ಮಿತಿಗಿಂತ ಹೆಚ್ಚಾದರೆ ಸ್ವಯಂಚಾಲಿತ ವ್ಯವಸ್ಥೆ ಅಲರ್ಟ್ ಆಗುತ್ತದೆ. ಕೂಡಲೇ ಫ್ಯಾನ್ ಸೀಲಿಂಗ್ ಹುಕ್‌ನಿಂದ ಬೇರ್ಪಡುತ್ತದೆ. ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿದರೆ ಫ್ಯಾನ್ ತಾನಾಗಿಯೇ ಕಳಚಿ ಬೀಳಲಿದೆ.

ಪರಿಸ್ಥಿತಿ ಬಗ್ಗೆ ಅವಲೋಕಿಸಲು ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗಟ್ಟುವ ಕ್ರಮಗಳ ಕುರಿತು ಚರ್ಚಿಸಲು ವಿವಿಯ ಪಠ್ಯಕ್ರಮ ಅಭಿವೃದ್ಧಿ ಕೋಶದ ಡಾ. ಸಂಜೀವ್ ನೇತೃತ್ವದ ತಂಡವು ಜುಲೈ ಕೊನೆಯ ವಾರದಲ್ಲಿ ಮಿಮ್ಸ್​​ಗೆ ಭೇಟಿ ನೀಡಿ ಸಮಾಲೋಚನೆ ನಡೆಸಿತ್ತು. ಆ ಸಂದರ್ಭದಲ್ಲಿ, ಮುಂದೆ ಇಂಥ ಘಟನೆಗಳನ್ನು ತಡೆಗಟ್ಟಲು ಸೀಲಿಂಗ್ ಫ್ಯಾನ್‌ಗಳಲ್ಲಿ ಸುರಕ್ಷತಾ ಸಾಧನಗಳನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಡಾ. ಸಂಜೀವ್ ಬಹಿರಂಗಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X