ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಮಪ್ಪ ಲಮಾಣಿ

Date:

  • ರಾಜ್ಯದಲ್ಲಿ ಇನ್ಮುಂದೆ ಬಿಜೆಪಿ ಧೂಳೀಪಟ ಆಗಲಿದೆ: ಲಮಾಣಿ
  • ಕಾಂಗ್ರೆಸ್ ಸೇರಲು 42 ನಾಯಕರು ಅರ್ಜಿ ಹಾಕಿದ್ದಾರೆ: ಡಿಕೆಶಿ

ಗದಗ ಜಿಲ್ಲೆಯ ಎಸ್ಸಿ ಮೀಸಲು ಕ್ಷೇತ್ರವಾದ ಶಿರಹಟ್ಟಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಕೈ ಹಿಡಿದರು. ಈ ವೇಳೆ ಸಚಿವ ಹೆಚ್​.ಕೆ.ಪಾಟೀಲ್​​, ಶಾಸಕ ಲಕ್ಷ್ಮಣ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, “ಕಾಂಗ್ರೆಸ್ ಪಕ್ಷ ಸೇರ್ಪಡೆಗೆ 42 ನಾಯಕರು ಅರ್ಜಿ ಹಾಕಿದ್ದಾರೆ. ನಂಬರ್ ಹೇಳಬಾರದು ಅಂದುಕೊಂಡಿದ್ದೆ, ಹೇಳುವ ಪರಿಸ್ಥಿತಿ ಬಂದಿದೆ” ಎನ್ನುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್‌ ಸೇರಿದ ಬಳಿಕ ರಾಮಪ್ಪ ಲಮಾಣಿ ಮಾತನಾಡಿ, “ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದೇನೆ. ಈಗ ಯಾವುದೇ ಷರತ್ತು ಇಲ್ಲದೇ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಪ್ರಕೃತಿ ವಿಕೋಪ ಅಲರ್ಟ್‌ ಮೆಸೇಜ್‌ಗೆ ಗಲಿಬಿಲಿಗೊಂಡ ಕಾಂಗ್ರೆಸ್‌ ನಾಯಕರು

“ಜಗದೀಶ ಶೆಟ್ಟರ್ ಹಾಗೂ ಡಿ ಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳೀಪಟ ಆಗಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1,500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...

ಅನಾರೋಗ್ಯ ಹಿನ್ನೆಲೆ; ರಾಹುಲ್ ಗಾಂಧಿ ಕೇರಳ ಚುನಾವಣಾ ಪ್ರಚಾರ ರದ್ದು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಏಪ್ರಿಲ್ 22...

ದೇಶದ ಇತಿಹಾಸದಲ್ಲಿ ಮೋದಿಯಷ್ಟು ತಮ್ಮ ಹುದ್ದೆಯ ಘನತೆಯನ್ನು ಯಾವ ಪ್ರಧಾನಿಯೂ ಇಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

'ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ನ ಪ್ರಣಾಳಿಕೆ'...

ಬಿಜೆಪಿ ಒತ್ತಡದಿಂದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ತಿರಸ್ಕಾರ; ಹೈಕೋರ್ಟ್‌ಗೆ ಹೋಗುತ್ತೇವೆಂದ ಕಾಂಗ್ರೆಸ್‌

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರವನ್ನು...