ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಲಯವು ಶನಿವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈಗಾಗಲೇ ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಅವರು ಜಾಮೀನಿನಲ್ಲಿ ಹೊರಬಂದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಇದನ್ನು ಓದಿದ್ದೀರಾ? ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ | ದುಷ್ಟ ಶಕ್ತಿಗಳನ್ನು ಸರ್ಕಾರ ಸೆದೆ ಬಡಿಯಬೇಕು: ಡಿ ಕೆ ಸುರೇಶ್
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿದೆ.
ಮುನಿರತ್ನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂತೆ 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
