ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Date:

ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

- Advertisement -

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್-ನೆತನ್ಯಾಹು ಮೇಲೇಕೆ ಭಾರತೀಯರಿಗೆ ಪ್ರೀತಿ?

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

ನ್ಯಾಯಾಲಯದಲ್ಲಿ ಲೈಂಗಿಕ ಕೃತ್ಯಗಳನ್ನು ನಿರಾಕರಿಸದ ಪ್ರಜ್ವಲ್ ರೇವಣ್ಣ ಪರ ವಕೀಲ ಪ್ರಭುಲಿಂಗ ನಾವದಗಿ “ಅವರು ಮಹಿಳೆಯರ ಒಪ್ಪಿಗೆ ಪಡೆದು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಹಾಗಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪ ಅನ್ವಯಿಸುವುದಿಲ್ಲ” ಎಂದು ವಾದಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಹಿರಿಯ ವಕೀಲ ರವಿವರ್ಮ ಕುಮಾರ್ ಈ ವಾದವನ್ನು ವಿರೋಧಿಸಿದ್ದಾರೆ.

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿದ್ದು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...