ಅತ್ಯಾಚಾರ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಿಐಡಿ ಅಧಿಕಾರಿಗಳಿಂದ ಚಾರ್ಜ್ ಶೀಟ್ ಸಲ್ಲಿಕೆ

Date:

ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

- Advertisement -

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್​ಶೀಟ್​​ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್​ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ವಿಡಿಯೋ, ಫೋಟೊ ಮಾಡಿರುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಎಚ್​ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬರೋಬ್ಬರಿ 63 ಪ್ರಶ್ನೆಗಳನ್ನು ಮುನಿರತ್ನ  ಮುಂದಿಡಲಾಗಿತ್ತು.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣವನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದಾರೆ. ಈ ಪೈಕಿ ಅವರ ವಿರುದ್ಧದ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಯತ್ನದ ಆರೋಪ ಬಹಳ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಮುನಿರತ್ನ ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಅವರನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು. ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು ಎಂದು ಸಂತ್ರಸ್ತೆ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 354(ಎ),354(ಸಿ), 376(2)(ಎನ್),308, 270,120ಬಿ,119,504,506,201,511, ರೆ/ವಿ 34 ಐಪಿಸಿ, ಕಲಂ 66ಇ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...