ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Date:

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

- Advertisement -

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಸಂದೇಶ್ ಮೇಲಿತ್ತು. ಇಲಾಖಾ ತನಿಖೆ ಬಾಕಿ ಇರುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಸಂದೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ ಘಟನೆ: ಇನ್ಸ್‌ಪೆಕ್ಟರ್ ಸೇರಿ ಮೂವರು ಅಮಾನತು

ಆದರೆ ಬಳಿಕ ಈ ಇಬ್ಬರು ಮಹಿಳೆಯರು ನೀಡಿದ್ದ ಲೈಂಗಿಕ ಕಿರುಕುಳದ ದೂರುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಕಮಿಷನರ್ ತಿಳಿಸಿದ್ದರು. ವೈರಲ್ ಆಗಿರುವ ಆಡಿಯೋ ಮತ್ತು ವಿಡಿಯೋಗಳಲ್ಲಿ ಇನ್‌ಸ್ಪೆಕ್ಟರ್ ಮಾತುಗಳು ಅಸಭ್ಯ ಮತ್ತು ಇಲಾಖೆಯ ಗೌರವಕ್ಕೆ ಧಕ್ಕೆ ತರುವಂತಿದೆ ಎಂದು ಪರಿಗಣಿಸಿ ದುರ್ನಡತೆ ಕಾರಣಕ್ಕಾಗಿ ಅಮಾನತುಗೊಳಿಸಲಾಗಿತ್ತು.

ಇದೀಗ ಬೆಳ್ತಂಗಡಿ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಶಿಕ್ಷಕಿ ನೀಡಿದ ದೂರಿನ ಆಧಾರದಲ್ಲಿ ಸಂದೇಶ್ ವಿರುದ್ಧ ಮಾರ್ಚ್ 22ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಶಿಕ್ಷಕಿ ದೂರಿದ್ದಾರೆ. ಈ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯ 376(2)(a)(1), 376(2)(n), 384 ಹಾಗೂ 506 ಕಲಂಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...