ವಿಶ್ವಗುರು ಬಸವಣ್ಣ ಕುರಿತು ಅವಹೇಳನ; ರವಿ ಹಂಜ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಲಿಂಗಾಯತ ಸಂಘಟನೆಗಳ ಆಗ್ರಹ

Date:

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಸೇರಿದಂತೆ ರಾಜ್ಯದ ಬಸವಪರ ಮತ್ತು ಲಿಂಗಾಯತ ಸಂಘಟನೆಗಳು ಆಗ್ರಹಿಸಿವೆ.

- Advertisement -

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಂಗಾಯತ ನಾಯಕ‌ ಜಮಾದಾರ್,‌ “2024ರ ಜನವರಿ ತಿಂಗಳಲ್ಲಿ ಕರ್ನಾಟಕ ಸರ್ಕಾರವು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದು ಸಮಸ್ತ ಬಸವಾಭಿಮಾನಿಗಳಿಗೆ ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಆದರೆ, ಅನಿವಾಸಿ ಭಾರತೀಯನಾದ ರವಿ ಹಂಜ ಎಂಬಾತ ಇತ್ತೀಚೆಗೆ ‘ವಿಶ್ವವಾಣಿ’ಗೆ ಸಂದರ್ಶನ ನೀಡಿದ್ದು, ಅದರಲ್ಲಿ ಬಸವಣ್ಣನವರ ಬಗ್ಗೆ ಅತ್ಯಂತ ಕೀಳು ಭಾಷೆಯನ್ನು ಬಳಸಿ ‘ಕಳ್ಳ, ಸುಳ್ಳ, ಕೊಲೆಗಾರ’ ಎಂದು ಏಕವಚನದಲ್ಲಿ ನಿಂದಿಸಿದ್ದಾನೆ. ಸಮಸ್ತ ಲಿಂಗಾಯತರನ್ನು ‘ಲಿಂಗಾ ಪಿಶಾಚಿ’ ಎಂದು ಕರೆದಿರುವ ರವಿ ಹಂಜ, 12ನೇ ಶತಮಾನದ ಎಲ್ಲ ಶರಣರು ಬರೆದ ವಚನಗಳ ಕುರಿತು ಆಧಾರರಹಿತವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

“ಬಸವ ಮಂಟಪ ಎಂಬ ಪುಸ್ತಕವನ್ನು ಮುದ್ರಿಸಿರುವ ಆತ, ಅದರಲ್ಲೂ ಕೂಡ ಬಸವಾದಿ ಶರಣರು, ವಚನ ಸಾಹಿತ್ಯ ಹಾಗೂ ಲಿಂಗಾಯತರ ಬಗ್ಗೆ ಅವಹೇಳನ ಮಾಡಿದ್ದಾನೆ” ಎಂದು ಕಿಡಿಕಾರಿದ್ದಾರೆ.

“ನವೆಂಬರ್ 13ರಂದು ವಿಶ್ವವಾಣಿ ಯೂಟ್ಯೂಬ್ ವಾಹಿನಿಯಲ್ಲಿ ಸಂಪಾದಕ ವಿಶ್ವೇಶ್ವರ ಭಟ್ ಅವರು ರವಿ ಹಂಜ ನೀಡಿರುವ ಆಧಾರರಹಿತ ಅವಹೇಳನಕಾರಿ ಸಂದರ್ಶನವನ್ನು ಪ್ರಸಾರ ಮಾಡುವ ಮೂಲಕ ಈ ಕೃತ್ಯಕ್ಕೆ ಕೈಜೋಡಿಸಿದ್ದಾರೆ. ಇದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಕರ್ನಾಟಕ ಸರ್ಕಾರಕ್ಕೆ ಮಾಡಿರುವ ಘೋರ ಅವಮಾನವಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಸರ್ಕಾರವು ಕೂಡಲೇ ‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಬಸವಣ್ಣರಿಗೆ ಅವಹೇಳನ ಮಾಡಿದ ರವಿ ಹಂಜ, ಸಂದರ್ಶನ ಪ್ರಸಾರ ಮಾಡಿದ ವಿಶ್ವವಾಣಿ ಸಂಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ರವಿ ಹಂಜ ಹಾಗೂ ವಿಶ್ವೇಶ್ವರ ಭಟ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿಶ್ವವಾಣಿ ಪತ್ರಿಕೆಯಲ್ಲಿ ನಿರಂತರವಾಗಿ ವಿಶ್ವಗುರು ಬಸವಣ್ಣನವರನ್ನು, ಶಿವಶರಣರನ್ನು, ಲಿಂಗಾಯತ ಮಠಾಧೀಶರನ್ನು, ಮುಖಂಡರನ್ನು ಹಾಗೂ ಲಿಂಗಾಯತ ಹೋರಾಟಗಾರರನ್ನು ಟೀಕಿಸುತ್ತಾ ತೇಜೋವಧೆ ಮಾಡುತ್ತಿದ್ದಾರೆ. ಇವರ ಹಿಂದೆ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಕೆಲವು ಅದೃಶ್ಯ ಶಕ್ತಿಗಳು ಲಿಂಗಾಯತರ ವಿರುದ್ಧ ಷಡ್ಯಂತ್ರ ರೂಪಿಸುತ್ತಿವೆ” ಎಂದು ಸಂಘಟನೆಗಳು ಆರೋಪಿಸಿವೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ...

ಬಸವಣ್ಣ ಅವಹೇಳನ: ಪರಾರಿಯಾಗಲು ಯತ್ನ; ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಬಂಧನ

12ನೇ ಶತಮಾನದ ಮಹಾನ್ ಸಮಾಜ ಸುಧಾರಕ ವಿಶ್ವಗುರು ಬಸವಣ್ಣನವರ ಕುರಿತು ತಮ್ಮ...

15,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ: ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಪ್ರಕಟ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ...

ಚಿಕಿತ್ಸಾ ನಿರ್ಲಕ್ಷ್ಯದಿಂದ ಮಹಿಳೆಗೆ ತೀವ್ರ ರಕ್ತಸ್ರಾವ: ಬೆಂಗಳೂರಿನ ವೈದ್ಯೆಗೆ ₹2 ಲಕ್ಷ ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಫಲವಾದ ಗರ್ಭಧಾರಣೆಯ ಬಳಿಕ ಗರ್ಭಕೋಶವನ್ನು ಶುಚಿಗೊಳಿಸುವ ಶಸ್ತ್ರಚಿಕಿತ್ಸೆಯನ್ನು (ಡಿ ಆ್ಯಂಡ್ ಸಿ)...