ಇಸ್ಲಾಂ ಶ್ರೇಷ್ಠ ಎಂದ ರಾಯರೆಡ್ಡಿ: ʼಸುನ್ನತ್ ಗ್ಯಾರಂಟಿʼ ಎಂದು ಅಶೋಕ್ ವ್ಯಂಗ್ಯ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

Date:

ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ವಿಚಾರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

- Advertisement -

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಸವರಾಜ ರಾಯರೆಡ್ಡಿ, ಜಗತ್ತಿನ ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿದ್ದಾರೆ. ಇದೇ ವೇಳೆ, ತಾನು ಹೆಚ್ಚಾಗಿ ಮಠ-ಮಂದಿರಗಳಿಗೆ ಹೋಗುವುದಿಲ್ಲ. ಆದರೆ ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರಾಯರೆಡ್ಡಿ ಅವರ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಕ್ರಮಕ್ಕೆ ಆಗ್ರಹಿಸಿದೆ. ಸಚಿವರು ಹಿಂದೂ ಸಮುದಾಯದ ಕ್ಷಮೆಯಾಚಿಸಬೇಕು. ಇಲ್ಲವಾದರೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ – ಹಿಂದೂಗಳಿಗೆ ʼಸುನ್ನತ್ ಗ್ಯಾರಂಟಿʼ ಎಂದು ವ್ಯಂಗ್ಯವಾಡಿದ್ದಾರೆ.

“ಮುಖ್ಯಮಂತ್ರಿ ಶಿವಕುಮಾರ್ ಅವರೇ, ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ನಾಟಕ ಆಡುವ ನಿಮಗೆ, ಅಧಿಕಾರ ಸಿಕ್ಕ ಮೇಲೆ ನಿಮ್ಮದೇ ಸಂಪುಟದ ಸಚಿವರು ಅದೇ ಹಿಂದೂ ಧರ್ಮವನ್ನು ಅವಹೇಳನ ಮಾಡಿದಾಗ ಮೌನ ವಹಿಸುವುದೇಕೆ?” ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಸಂಪುಟದ ಸಚಿವ ಬಸವರಾಜ ರಾಯರೆಡ್ಡಿ ಅವರು “ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ” ಎಂದು ಬಹಿರಂಗವಾಗಿ ನೀಡಿರುವ ಪ್ರಚೋದನಕಾರಿ ಹೇಳಿಕೆ ಇಡೀ ರಾಜ್ಯದ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಧರ್ಮದ ಬಗ್ಗೆ ಯಾರಿಗಾದರೂ ಅವರವರ ವೈಯಕ್ತಿಕ ನಂಬಿಕೆ ಇರಬಹುದು. ಆದರೆ ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿದ್ದುಕೊಂಡು ಕೋಟ್ಯಂತರ ಹಿಂದೂಗಳ ಆರಾಧನೆ, ಪವಿತ್ರ ಮಠ-ಮಾನ್ಯಗಳು ಹಾಗೂ ಸನಾತನ ಪರಂಪರೆಯ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರ ಮತ್ತು ಹಿಂದೂ ಧರ್ಮದ ಮೇಲಿನ ಬಹಿರಂಗ ದಾಳಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ರಾಯರೆಡ್ಡಿ ಅವರ ಹೇಳಿಕೆ ಹಿಂದೂಗಳ ಶ್ರದ್ಧೆ ಮತ್ತು ನಂಬಿಕೆಗಳಿಗೆ ಮಾಡಿರುವ ಘೋರ ಅಪಮಾನವಾಗಿದೆ ಎಂದು ಆರೋಪಿಸಿರುವ ಅಶೋಕ್, ಕರ್ನಾಟಕದ ಕೋಟ್ಯಂತರ ಹಿಂದೂಗಳಿಗೆ ರಾಯರೆಡ್ಡಿ ಅವರ ಅವಹೇಳನಕಾರಿ ಹೇಳಿಕೆಗಿಂತಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜಾಣ ಮೌನವೇ ಹೆಚ್ಚಿನ ಆಕ್ರೋಶ ತರಿಸುತ್ತಿದೆ ಎಂದು ಹೇಳಿದ್ದಾರೆ.

“ಹಿಂದೂಗಳ ಭಾವನೆ ನಜ್ಜುಗುಜ್ಜಾದರೂ ಚಿಂತೆಯಿಲ್ಲ, ಓಲೈಕೆ ರಾಜಕಾರಣಕ್ಕಾಗಿ ಸಚಿವರನ್ನು ಮಾತ್ರ ರಕ್ಷಿಸಬೇಕು! ಇದೇ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಅಸಲಿ ಮುಖವಲ್ಲವೇ?” ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ರಾಯರೆಡ್ಡಿ ಅವರ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿರುವ ಅವರು, ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಸಚಿವರಿಂದ ತಕ್ಷಣವೇ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

“ರಾಯರೆಡ್ಡಿ ಅವರು ಕ್ಷಮೆಯಾಚಿಸಲು ಸಿದ್ಧರಿಲ್ಲದಿದ್ದರೆ, ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿ. ಇವೆರಡನ್ನೂ ಮಾಡದಿದ್ದರೆ ರಾಜ್ಯದ ಕೋಟ್ಯಂತರ ಹಿಂದೂಗಳ ಈ ಪ್ರಶ್ನೆಗಳಿಗೆ ನಿಮ್ಮ ಮೌನವೇ ಉತ್ತರವಾಗಲಿದೆ” ಎಂದು ಅಶೋಕ್ ಹೇಳಿದ್ದಾರೆ.

ಇದೇ ವೇಳೆ, ಸನಾತನ ಧರ್ಮವನ್ನು ನಿಂದಿಸಿರುವುದು ರಾಯರೆಡ್ಡಿ ಅವರ ವೈಯಕ್ತಿಕ ಅಭಿಪ್ರಾಯವೋ ಅಥವಾ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಮ್ಮತಿ ಪಡೆದ ‘ಹಿಡನ್ ಅಜೆಂಡಾ’ವೋ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮ ಮತ್ತು ಮಠ-ಮಾನ್ಯಗಳ ಮೇಲೆ ದಾಳಿಯಾದಾಗ ಕಣ್ಣು, ಕಿವಿ ಹಾಗೂ ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಧಾರ್ಮಿಕ ನಿಂದನೆಯ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....