ಎರಡನೇ ಬಾರಿಗೆ ರೆಪೋ ದರ ಇಳಿಸಿದ ಆರ್‌ಬಿಐ: ಯಾರಿಗೆ ಲಾಭ?

Date:

Advertisements

ಆರ್‌ಬಿಐ(RBI) ಈ ವರ್ಷ ಸತತ ಎರಡನೇ ಬಾರಿಗೆ ಪ್ರಮುಖ ಬಡ್ಡಿದರಗಳನ್ನು ಪರಿಷ್ಕರಿಸಿದೆ. ತನ್ನ ರೆಪೋ ದರ(Repo Rate)ವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದ್ದು, ಈ ಮೂಲಕ ರೆಪೋ ದರ ಶೇ. 6.25ರಿಂದ ಶೇ. 6ಕ್ಕೆ ಇಳಿದಿದೆ.

“ಕಳೆದ ಫೆಬ್ರವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲೂ 25 ಮೂಲಾಂಕಗಳಷ್ಟು ಬಡ್ಡಿದರವನ್ನು ಇಳಿಸಲಾಗಿತ್ತು. ಈಗ ಮತ್ತೊಮ್ಮೆ ರೆಪೋ ದರ ಕಡಿಮೆ ಮಾಡಲು ಹಣಕಾಸು ನೀತಿ ಸಮಿತಿಯು ಸರ್ವಾನುಮತದಿಂದ ಒಪ್ಪಿಕೊಂಡಿದೆ” ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರ್‌ಬಿಐ ರೆಪೋ ದರ ಇಳಿಸಿರುವುದರಿಂದ, ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಅನುವು ಮಾಡಿಕೊಡುತ್ತದೆ. ಸಾಲಗಳ ಮೇಲಿನ ಇಎಂಐಗಳ ಮೊತ್ತ ಕಡಿಮೆ ಮಾಡುತ್ತದೆ ಎಂದು ವರದಿ ತಿಳಿಸಿದೆ. ಇದರಿಂದ ಮನೆ, ವಾಹನ ಮತ್ತು ವೈಯಕ್ತಿಕ ಸಾಲಗಾರರಿಗೆ ತುಸು ಲಾಭವಾಗಲಿದೆ.

ಇದನ್ನೂ ಓದಿ: ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್‌ ಬೆದರಿಕೆ

ಆರ್​​ಬಿಐನಿಂದ ಸಾಲ ಪಡೆಯಲು ಬ್ಯಾಂಕುಗಳು ತೆರಬೇಕಿರುವ ಬಡ್ಡಿದರವೇ ರಿಪೋ ರೇಟ್. ಹಣದುಬ್ಬರವನ್ನು ನಿಯಂತ್ರಿಸಲು ಆರ್​​ಬಿಐ ಈ ಅಸ್ತ್ರ ಪ್ರಯೋಗಿಸುತ್ತದೆ. ಬೆಲೆ ಏರಿಕೆ ಆಗುವ ಸಂದರ್ಭಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಣದ ಹರಿವು ಕಡಿಮೆ ಮಾಡಲು ಆರ್​​ಬಿಐ ರೆಪೋ ದರ ಹೆಚ್ಚಿಸುತ್ತದೆ. ಹಣದುಬ್ಬರ ನಿಯಂತ್ರಣದಲ್ಲಿದ್ದರೆ, ಮತ್ತು ಆರ್ಥಿಕತೆಗೆ ಪುಷ್ಟಿ ಸಿಗುವ ಅವಶ್ಯಕತೆ ಇದೆ ಎನಿಸಿದಲ್ಲಿ ಆಗ ಬ್ಯಾಂಕಿಂಗ್ ವಲಯಕ್ಕೆ ಹೆಚ್ಚು ಹಣದ ಹರಿವು ಬೇಕಾಗುತ್ತದೆ. ಆಗ ರೆಪೋ ದರವನ್ನು ಇಳಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X