ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು; ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ!

Date:

ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ‘ನಕಲಿ ಮತ್ತು ಮೃತ ಫಲಾನುಭವಿಗಳನ್ನು ಪತ್ತೆ ಹಚ್ಚಲು, ಅರ್ಜಿ ಫಲಾನುಭವಿಗಳಿಗೆ ಯೋಜನೆಯ ಫಲಾನುಭವ ದೊರೆಯುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.

- Advertisement -

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಡಿ.ಕೆ ಶಿವಕುಮಾರ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ ಶಿವಕುಆರ್, “ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಅನಿವಾರ್ಯವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 100 ಕೋಟಿ ರೂಪಾಯಿ ಹಣ ಮೃತಪಟ್ಟ ಮಹಿಳೆಯರ ಖಾತೆಗಳಿಗೆ ಸಂದಾಯವಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ, ಗೃಹಲಕ್ಷ್ಮಿಯ 1.28 ಕೋಟಿ ಫಲಾನುಭವಿಗಳ ಪೈಕಿ ಸುಮಾರು 4.30 ಲಕ್ಷಕ್ಕೂ ಹೆಚ್ಚು ಮಂದಿ ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರರಿದ್ದಾರೆ. ಕೆಲವರು ಬೇರೆ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳನ್ನು ನೀಡಿ ಅನಧಿಕೃತವಾಗಿ ಹಣ ಪಡೆಯುತ್ತಿದ್ದಾರೆ. ಅವರನ್ನು ಪತ್ತೆ ಹಚ್ಚಿ, ಅರ್ಹರನ್ನು ಉಳಿಸಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

“ನಾವು ಯಾರಿಗೂ ಯೋಜನೆಯನ್ನೂ ನಿಲ್ಲಿಸುವುದಿಲ್ಲ ಅಥವಾ ಯಾರನ್ನೂ ಪಟ್ಟಿಯಿಂದ ಕೈಬಿಡುವುದಿಲ್ಲ. ಆದರೆ, ಸರ್ಕಾರ ನೀಡುವ ಹಣ ಜನರ ಜೀವನೋಪಾಯಕ್ಕೆ ಬಳಕೆಯಾಗುತ್ತಿದೆಯೇ, ಫಲಾನುಭವಿಗಳು ಕರ್ನಾಟಕದವರೇ ಅಥವಾ ಬೇರೆ ರಾಜ್ಯದವರೇ ಎಂಬುದನ್ನು ಪತ್ತೆ ಹಚ್ಚಲು ಸರಿಯಾದ ಮಾಹಿತಿ ಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಅರ್ಜಿಯ ಸ್ವರೂಪ ಹೇಗಿರಲಿದೆ?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈಗಾಗಲೇ ಹೊಸ ಅರ್ಜಿ ಪ್ರತಿಯನ್ನು ಸಿದ್ಧಪಡಿಸಿ ಹಣಕಾಸು ಇಲಾಖೆಯ ಅನುಮೋದನೆಗೆ ಸಲ್ಲಿಸಿದೆ. ಹೊಸ ಅರ್ಜಿಯಲ್ಲಿ ಬಯೋಮೆಟ್ರಿಕ್ ಕಡ್ಡಾಯವಾಗಲಿದೆ. ಫಲಾನುಭವಿಗಳು ಸುಮಾರು 8 ರಿಂದ 10 ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?
* ಮನೆ ಯಜಮಾನಿಯ ಹೆಸರು ಮತ್ತು ಆಧಾರ್ ಸಂಖ್ಯೆ
* ಮನೆ ಯಜಮಾನಿಯ ಬ್ಯಾಂಕ್ ಖಾತೆ ವಿವರಗಳು (ಪಾಸ್‌ಬುಕ್)
* ಫಲಾನುಭವಿಯ ಜಾತಿ + ಆಧಾಯ ಪ್ರಮಾಣ ಪತ್ರ
* ಫಲಾನುಭವಿಯ ಪತಿಯ ಹೆಸರು ಮತ್ತು ಆಧಾರ್ ಸಂಖ್ಯೆ
* ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿ
* ಆದಾಯ ತೆರಿಗೆ (IT) ಅಥವಾ ಜಿಎಸ್‌ಟಿ (GST) ಪಾವತಿದಾರರೇ ಎಂಬುದರ ಮಾಹಿತಿ
* ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರ ಖಾತೆಗೆ ಗೃಹಲಕ್ಷ್ಮಿ ಹಣ ಬರುತ್ತಿತ್ತು?

ಅರ್ಜಿ ಸಲ್ಲಿಕೆ ಎಲ್ಲಿ? ಜವಾಬ್ದಾರಿ ಯಾರಿಗೆ?
ಸರ್ಕಾರವು ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳೊಂದಿಗೆ ಅರ್ಜಿ ಸಲ್ಲಿಕೆಗೆ ಅಧಿಕೃತ ಚಾಲನೆ ನೀಡಲಿದೆ. ಸಾರ್ವಜನಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...